ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್‌ನ ಅಮೃತಸರದ ಗಡಿಯಲ್ಲಿ 3 ಕೆ.ಜಿ ತೂಕದ ಮಾದಕ ವಸ್ತು ಹೆರಾಯಿನ್ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ. ಬಳಿಕ ಎರಡು ಪ್ಯಾಕೆಟ್ಗಳ ಹೆರಾಯಿನ್ ವಶಕ್ಕೆ ಪಡೆಯಲಾಗಿದೆ.
ಅಮೃತಸರದ ಗಡಿ ಭಾಗದಲ್ಲಿ ಬರುವ ಬಿಒಪಿ ರಾಜತಾಲ್ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಬಿಎಸ್‌ಎಫ್‌ನ 144 ಕಾರ್ಪ್ಸ್ ಪಡೆ, ಪಾಕ್ನಿಂದ ಹಾರಿಬಂದ ಡ್ರೋನ್ ವೀಕ್ಷಿಸಿದ್ದಾರೆ. ತಕ್ಷಣವೇ ಕಾರ್ಯಾಚರಣೆಗಿಳಿದಿದ್ದು, ತಪಾಸಣೆಯಲ್ಲಿ ಹೆರಾಯಿನ್ ಇರುವ 2 ಪ್ಯಾಕೆಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಮೃತಸರದ ಬಿಎಸ್ಎಫ್ ಕಮಾಂಡೆಂಟ್ ಅಜಯ್ ಕುಮಾರ್ ಮಿಶ್ರಾ ಹೇಳಿದರು.
ನಿಷೇಧಿತ ಪ್ರದೇಶದಲ್ಲಿ ಡ್ರೋನ್ ಹಾರಿ ಬರುತ್ತಿತ್ತು. ಇದರಲ್ಲಿ ಬಿಳಿಯ ಪ್ಯಾಕೆಟ್ಗಳು ಇರುವುದನ್ನು ಗಮನಿಸಿ ದಾಳಿ ಮಾಡಿ ಹೊಡೆದುರುಳಿಸಲಾಗಿದೆ. ಕಳ್ಳಸಾಗಣಿಕೆ ತಡೆಯಲು ಗಡಿಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.