ಹೊಸದಿಗಂತ ಡಿಜಿಟಲ್ ಡೆಸ್ಕ್:
ಮನೆ ಮೇಲೆ ಹಾದುಹೋಗಿದ್ದ ವಿದ್ಯುತ್ ತಂತಿ ತಗುಲಿ ಬಾಲಕಿ ಸಾವನ್ನಪ್ಪಿರುವ ದುರ್ಘಟನೆ ಬೆಳಗಾವಿ ಜಿಲ್ಲೆಯ ಮಚ್ಛೆ ಗ್ರಾಮದಲ್ಲಿ ನಡೆದಿದೆ.
13 ವರ್ಷದ ಮಧುರಾ ಕೇಶವ್ ಮೋರೆ ಮೃತಪಟ್ಟ ಬಾಲಕಿ. ಖಾನಾಪುರ ತಾಲೂಕಿನ ಮಾಚಿಘಡ ಗ್ರಾಮದ ನಿವಾಸಿ. ಶಾಲೆಗೆ ರಜೆ ಹಿನ್ನೆಲೆಯಲ್ಲಿ ಸೋದರ ಮಾವನ ಮನೆಗೆ ಬಂದಿದ್ದಾಗ ಈ ದುರಂತ ಸಂಭವಿಸಿದೆ.
ಮನೆ ಮೇಲೆ ಆಟವಾಡುತ್ತಿದ್ದಾಗ ಬಾಲಕಿಗೆ ವಿದ್ಯುತ್ ತಂತಿ ತಗುಲಿ ಬಾಲಕಿ ಸಾವನ್ನಪ್ಪಿದ್ದಾಳೆ.
ಹಲವು ಬಾರಿ ಹೆಸ್ಕಾಂ ಗೆ ಹೇಳಿದರು ಅಧಿಕಾರಿಗಳು ವಿದ್ಯುತ್ ತಂತಿ ಸರಿಪಡಿಸಿರಲಿಲ್ಲ. ಅಧಿಕಾರಿಗಳ ನಿರ್ಲಕ್ಷಕ್ಕೆ ಬಾಲಕಿ ಮೃತಪಟ್ಟಿದ್ದಾಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಯ ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಬಳಿಕ ಕುಟುಂಬಸ್ಥರಿಗೆ ಶವವನ್ನು ಹಸ್ತಾಂತರಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.