ಸಿದ್ದರಾಮಯ್ಯ ವಿರುದ್ಧ ಹೇಳಿಕೆಗೆ ಮಾಜಿ ಸಚಿವರ ಮೇಲೆ ಎಫ್‌ಐಆರ್‌ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸಿದ್ದರಾಮಯ್ಯರನ್ನು ಟಿಪ್ಪು ಸುಲ್ತಾನ್‌ನಂತೆಯೇ ಕೊಲೆ ಮಾಡಿ ಎಂಬ ಹೇಳಿಕೆ ಕೊಟ್ಟಿದ್ದರು ಎಂದು ಆರೋಪಿಸಿ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿಎನ್ ಅಶ್ವಥ್ ನಾರಾಯಣ್ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಶ್ವಥ್ ನಾರಾಯಣ್ ಬಂಧನಕ್ಕೆ ಕರ್ನಾಟಕದ ಕಾಂಗ್ರೆಸ್ ನಾಯಕರು ಕೂಡ ಒತ್ತಾಯಿಸುತ್ತಿದ್ದಾರೆ.

ಈ ಹಿಂದೆ ಮಂಡ್ಯ ಜಿಲ್ಲೆಯ ಸಾತನೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನೂ ಹೊಡೆಯಿರಿ ಎಂಬ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಈ ಎಫ್‌ಐಆರ್‌ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಎಂಬುವವರು ಆಗಲೇ ಮೈಸೂರಿನ ದೇವರಾಜ ಪೊಲೀಸ್ ಠಾಣೆ ದೂರು ನೀಡಿದ್ದರು. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದೀಗ ಮತ್ತೊಮ್ಮೆ ಪೊಲೀಸ್ ಠಾಣೆಗೆ ಹೋಗಿ ಮರು ದೂರು ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!