Friday, December 19, 2025

ತರಗತಿಯಲ್ಲೇ ಸಹಪಾಠಿಯ ಕತ್ತು ಸೀಳಿದ ವಿದ್ಯಾರ್ಥಿ: ಶಿಕ್ಷಕರ ಎದುರೇ ನಡೆಯಿತು ಘೋರ ದುರಂತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ರಾಜಗುರು ನಗರದಲ್ಲಿನ ಶಾಲೆಯೊಂದರಲ್ಲಿ ಸಂಭವಿಸಿದ ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿರುವ ಸಂದರ್ಭದಲ್ಲೇ 10 ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಯ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದಾನೆ.

ಪೊಲೀಸ್ ಮೂಲಗಳ ಪ್ರಕಾರ, ಕಳೆದ ಕೆಲವು ದಿನಗಳಿಂದ ಇಬ್ಬರು ವಿದ್ಯಾರ್ಥಿಗಳು ಜಗಳವಾಡುತ್ತಿದ್ದರು ಎಂದು ವರದಿಯಾಗಿದೆ. ತರಗತಿಯೊಳಗೇ ಆರೋಪಿ ವಿದ್ಯಾರ್ಥಿ ಸಹಪಾಠಿಯ ಕತ್ತು ಸೀಳಿ ಕೊಲೆಗೆ ಕೊಲೆಗೆ ಯತ್ನಿಸಿದ್ದಾನೆ. ಇತರ ವಿದ್ಯಾರ್ಥಿಗಳ ಕಣ್ಣೆದುರೇ ಈ ಹಿಂಸಾಚಾರ ನಡೆದಿದ್ದು, ಗಾಯಗೊಂಡ ವಿದ್ಯಾರ್ಥಿ ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯ ಬಳಿಕ ಆರೋಪಿ ವಿದ್ಯಾರ್ಥಿ ದ್ವಿಚಕ್ರ ವಾಹನದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆತನ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಶಾಲಾ ಆಡಳಿತದಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

error: Content is protected !!