ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಗಮನ ಸೆಳೆದ ಸರ್ವಧರ್ಮ ಪ್ರಾರ್ಥನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂದು ನೂತನ ಸಂಸತ್ ಭವನ ಉದ್ಘಾಟನಾ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ನಾಮಫಲಕವನ್ನು ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆ ವಿಶೇಷವಾಗಿ ಗಮನ ಸೆಳೆಯಿತು.

https://twitter.com/ANI/status/1662651334590611458?s=20

ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಪೂಜಾ ಕೈಂಕರ್ಯಗಳು ಬೆಳಗ್ಗೆ 7.30 ರಿಂದ ಆರಂಭವಾಗಿದೆ. ಬಳಿಕ ಐತಿಹಾಸಿಕ ಸೆಂಗೋಲ್ ಅನ್ನು ಪ್ರಧಾನಿ ಮೋದಿ ಅವರು ಲೋಕಸಭಾ ಸ್ಪೀಕರ್ ಸ್ಥಾನದ ಸಮೀಪದಲ್ಲಿ ಪ್ರತಿಷ್ಠಾಪಿಸಿ, ದೀಪ ಬೆಳಗಿದರು. ಮಂತ್ರ-ವಾದ್ಯ ಘೋಷ, ಮಂಗಳವಾದ್ಯಗಳಿಂದ ರಾಜದಂಡವನ್ನು ಪ್ರತಿಷ್ಠಾಪಿಸಲಾಯಿತು. ಈ ವೇಳೆ ಪ್ರಧಾನಿಯವರಿಗೆ ಲೋಕಸಬಾ ಸ್ಪೀಕರ್ ಓಂ ಬಿರ್ಲಾ (Om Birla) ಕೂಡ ಸಾಥ್ ನೀಡಿದರು.

https://twitter.com/ANI/status/1662653934945857536?s=20

ಪೂಜಾ-ವಿಧಿವಿಧಾನಗಳು ನಡೆಯುತ್ತಿದ್ದು, ವಿವಿಧ ಧರ್ಮದ ಮುಖಂಡರು ಪ್ರಾರ್ಥನೆ ಸಲ್ಲಿಸುವ ಮೂಲಕ ಸೌಹಾರ್ದತೆಯ ಸಂದೇಶವನ್ನು ಸಾರಿದರು. ಪ್ರಾರ್ಥನಾ ಸಭೆಯಲ್ಲಿ ಪಂಡಿತರು, ಸಾಧು-ಸಂತರು ಭಾಗಿಯಾಗಿದ್ದು, 12 ಮಂದಿ ಧಾರ್ಮಿಕ ನಾಯಕರಿಂದ ಪ್ರಾರ್ಥನೆ ನಡೆಯುತ್ತಿದೆ. ಈ ಮಧ್ಯೆ ಕಾರ್ಮಿಕರಿಗೆ ಶಾಲು ಹೊದಿಸಿ ಪ್ರಧಾನಿಯವರು ಸನ್ಮಾನ ಮಾಡಿದರು.

ಕಾರ್ಯಕ್ರಮಕ್ಕೆ ಸುಮಾರು 60 ಧಾರ್ಮಿಕ ಮುಖ್ಯಸ್ಥರನ್ನು ಕರೆಸಲಾಗಿದ್ದು, ಅವರಲ್ಲಿ ಹಲವರು ತಮಿಳುನಾಡಿನವರಾಗಿದ್ದಾರೆ. ಧಾರ್ವಿಕ ಕಾರ್ಯಕ್ರಮದಲ್ಲಿ ಶೃಂಗೇರಿ ಶ್ರೀ ಶಾರದಾ ಪೀಠದ ಋತ್ವಿಜರಾದ ಟಿ.ವಿ. ಸೀತಾರಾಮ ಶರ್ಮ, ಶ್ರೀರಾಮ ಶರ್ಮ, ಲಕ್ಷ್ಮೀಶ ತಂತ್ರಿ ಹಾಗೂ ದೆಹಲಿ ಶಾಖಾ ಮಠದ ನಾಗರಾಜ ಅಡಿಗ, ಋಷ್ಯಶೃಂಗ ಭಟ್ ಪಾಲ್ಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!