ವಿಶ್ವದಲ್ಲೇ ಭಾರತದ ಘನತೆ ಹೆಚ್ಚಾಗಿದೆ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಡೀ ದೇಶವೇ ನೂತನ ಸಂಸತ್ ಭವನದ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದೆ. ಈ ಘಳಿಗೆಯಿಂದಾಗಿ ವಿಶ್ವದಲ್ಲಿ ಭಾರತದ ಘನತೆ ಹೆಚ್ಚಿದೆ. ಪ್ರಜಾಪ್ರಭುತ್ವವು ನಮ್ಮ ಭವಿಷ್ಯದ ಅಡಿಪಾಯವಾಗಿದೆ. ವಿವಿಧತೆಯಲ್ಲಿ ಏಕತೆಯೇ ನಮ್ಮ ಶಕ್ತಿ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದರು.

ನೂತನ ಸಂಸತ್ ಭವನದ ಉದ್ಘಾಟನೆಯ ಬಳಿಕ ನಡೆದ ಎರಡನೇ ಹಂತದ ಕಾರ್ಯಕ್ರಮದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ 2.5 ವರ್ಷಗಳಲ್ಲಿ ಕಡಿಮೆ ಅವಧಿಯಲ್ಲಿ ಹೊಸ ಸಂಸತ್ ಭವನವನ್ನು ನಿರ್ಮಿಸಲಾಗಿದೆ. ಇದಕ್ಕಾಗಿ ಪ್ರಧಾನಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ನೂತನ ಸಂಸತ್ತಿನ ವಾತಾವರಣವು ಹೊಸ ಹೊಸ ಆಲೋಚನೆಗಳನ್ನು ಹುಟ್ಟುಹಾಕುತ್ತದೆ ಎಂಬ ವಿಶ್ವಾಸ ನನಗಿದೆ. ನಮ್ಮ ಸಂಸದೀಯ ವ್ಯವಸ್ಥೆಯ ಉತ್ತಮ ತತ್ವಗಳನ್ನು ನಾವು ಇನ್ನಷ್ಟು ಮುಂದಕ್ಕೆ ತೆಗೆದುಕೊಳ್ಳಬೇಕು. ನೂತನ ಸಂಸತ್​ ಭವನ ಮಹತ್ವದ ವಿಚಾರಗಳ ಬಗ್ಗೆ ಚರ್ಚೆಗೆ ವೇದಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ವೇದಿಕೆಯಾಗಲಿದೆ ಎಂದು ಸ್ಪೀಕರ್​ ಓಂ ಬಿರ್ಲಾ ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!