ಸರ್ಕಾರಿ ಬಸ್‌-ಕಾರು ನಡುವೆ ಮುಖಾಮುಖಿ ಡಿಕ್ಕಿ, ನಾಲ್ವರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಪ್ರಕಾಶಂ ಜಿಲ್ಲೆಯ ತ್ರಿಪುರಾಂತಕಂ ಬಳಿ ನಡೆದಿದೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ರಸ್ತೆ ಅಪಘಾತದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರ್ ಟಿಸಿ ಬಸ್ ಚಾಲಕನನ್ನು ಬಂಧಿಸಲಾಗಿದೆ. ಮೃತರ ವಿವರ ಪತ್ತೆ ಹಚ್ಚುವಲ್ಲಿ ಪೊಲೀಸರು ನಿರತರಾಗಿದ್ದಾರೆ.

ತ್ರಿಪುರಾಂತಕಂ ಬಳಿಯ ಅನಂತಪುರ-ಅಮರಾವತಿ ಎಕ್ಸ್‌ಪ್ರೆಸ್ ಹೆದ್ದಾರಿಯ ಮೇಲ್ಸೇತುವೆಯಲ್ಲಿ ಅಪಘಾತ ಸಂಭವಿಸಿದೆ. ರಾಂಗ್ ರೂಟ್ ಸರ್ವಿಸ್ ರಸ್ತೆಯಲ್ಲಿ ಕಾರು ಫ್ಲೈಓವರ್ ಹತ್ತುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಆರ್ ಟಿಸಿ ಬಸ್ ಗಮನಹರಿಸದೆ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಕಾರಿನಲ್ಲಿ ಆರು ಮಂದಿ ಪ್ರಯಾಣಿಸುತ್ತಿದ್ದರು. ಮದುವೆ ಅಲಂಕಾರಕ್ಕೆಂದು ಅನಂತಪುರಕ್ಕೆ ಹೋಗಿ ಕೆಲಸ ಮುಗಿಸಿ ವಿಜಯವಾಡಕ್ಕೆ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಿದ್ದಾರೆ. ನಂತರ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಮತ್ತೊಂದು ಬಸ್ ಮೂಲಕ ಹಿಂದೂಪುರಕ್ಕೆ ಕಳುಹಿಸಲಾಯಿತು. ಅಪಘಾತದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!