ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದ್ದು, ಮೇ 20 ರಂದು ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರೊಂದಿಗೆ ಎಂಟು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಸಚಿವ ಸಂಪುಟ ವಿಸ್ತರಣೆಯಲ್ಲಿ ತಾತನಿಗೆ ಸಚಿವ ಸ್ಥಾನ ನೀಡದಿದ್ದಕ್ಕೆ ಏಳರ ಹರೆಯದ ಬಾಲಕಿ ಬೇಸರಗೊಂಡಿದ್ದಳು. ಅಷ್ಟಕ್ಕೇ ನಿಲ್ಲದ ಬಾಲಕಿ, ಅಜ್ಜನಿಗೆ ಏಕೆ ಸಚಿವ ಸ್ಥಾನ ನೀಡಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾಳೆ. ಇದೀಗ ಆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ʻನನ್ನ ಅಜ್ಜ ತುಂಬಾ ಸಮರ್ಥ ಮತ್ತು ಶ್ರಮಶೀಲ ವ್ಯಕ್ತಿ. ಪತ್ರದಲ್ಲಿ ಮಗು ರಾಹುಲ್ ಗಾಂಧಿ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡುವಂತೆ ಕೋರಿದೆ. ಏಳು ವರ್ಷದ ಈ ಮಗುವಿನ ಹೆಸರು ಅರ್ನಾ ಸಂದೀಪ್. ಕರ್ನಾಟಕದ ಹಿರಿಯ ಕಾಂಗ್ರೆಸ್ ಶಾಸಕ ಟಿ.ವಿ.ಜಯಚಂದ್ರ ಅವರ ಮೊಮ್ಮಗಳು. ತಾತನಿಗೆ ಸಚಿವ ಸ್ಥಾನ ನೀಡಿಲ್ಲ ಎಂದು ತಿಳಿದು ಅಳಲು ತೋಡಿಕೊಂಡರು. ಕುಟುಂಬಸ್ಥರು ಮಗುವಿಗೆ ಸಾಂತ್ವನ ಹೇಳಿ ರಾಹುಲ್ ಗಾಂಧಿಗೆ ಪತ್ರ ಬರೆಯುವಂತೆ ತಿಳಿಸಿದರು. ಅರ್ನಾ ಇದನ್ನು ಗಂಭೀರವಾಗಿ ಪರಿಗಣಿಸಿ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾಗಿ ಅರ್ನಾ ತಂದೆ ತಿಳಿಸಿದ್ದಾರೆ.
ಈ ವೇಳೆ, ಸಚಿವ ಸಂಪುಟದಲ್ಲಿ ಕುಂಚಿಟಿಗ ಸಮುದಾಯಕ್ಕೆ ಪ್ರಾತಿನಿಧ್ಯ ಸಿಗದ ಕಾರಣ ತೀವ್ರ ಅನ್ಯಾಯವಾಗಿದೆ ಎಂದು ಆರೋಪಿಸಿ ಟಿ.ಬಿ.ಜಯಚಂದ್ರ ಬೆಂಬಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಮುಂದೆ ಧರಣಿ ನಡೆಸಿದ್ದರು.