ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಾತೆ ಸಿಕ್ಕ ಬಳಿಕ ಮೊದಲ ಬಾರಿಗೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ನಗರದಲ್ಲಿನ ರಸ್ತೆಗುಂಡಿಗಳು, ಅಪಾಯಕಾರಿ ಅಂಡರ್ ಪಾಸ್, ಮಳೆ ಅವಾಂತರ ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಚರ್ಚಿಸಿದರು.
ಬಿಬಿಎಂಪಿಯ ಸಮಸ್ಯೆ ಹಾಗು ಸವಾಲುಗಳ ಬಗ್ಗೆ ನೂತನ ಸಚಿವ ಡಿ.ಕೆ.ಶಿವಕುಮಾರ್ ಸಭೆ ನಡೆಸಿದರು.
ಹಿಂದಿನ 6 ತಿಂಗಳ ಬಿಲ್ ಬಗ್ಗೆಯೂ ಡಿಸಿಎಂ ಡಿ.ಕೆ. ಶಿವಕುಮಾರ್ ಸಭೆಯಲ್ಲಿ ಮಾಹಿತಿ ಕೇಳಿದ್ದಾರೆ. ಇಂದಿರಾ ಕ್ಯಾಂಟೀನ್ ಪುನರಾರಂಭದ ಬಗ್ಗೆಯೂ ಚರ್ಚೆ ನಡೆದಿದೆ. ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು.