ಸಂಸತ್ ಭವನ ಉದ್ಘಾಟನೆ: ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ದಾಳಿಗೆ ಮತ್ತೊಂದು ಉದಾಹರಣೆ ಎಂದ ಕೇರಳ ಸಿಎಂ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹೊಸ ಸಂಸತ್ ಭವನ ಉದ್ಘಾಟನಾ ಸಮಾರಂಭ ದೇಶದಲ್ಲಿ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ದಾಳಿಗೆ ಮತ್ತೊಂದು ಉದಾಹರಣೆಯಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಿಡಿಕಾರಿದ್ದಾರೆ.

ಇಂದು ಉದ್ದೇಶಪೂರ್ವಕವಾಗಿ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುವ ಯತ್ನಗಳು ನಡೆಯುತ್ತಿದ್ದು, ಸಂಸತ್ತಿನ ಉದ್ಘಾಟನಾ ಸಮಾರಂಭವೇ ಇದಕ್ಕೆ ಅತ್ಯುತ್ತಮ ಉದಾಹರಣೆಯಾಗಿದೆ ಎಂದರು.

ನಮ್ಮ ದೇಶದಲ್ಲಿ ಜಾತ್ಯತೀತತೆ ಮೇಲೆ ದಾಳಿ ನಡೆಯುತ್ತಿದೆ. ಭಾರತ ಜಾತ್ಯತೀತ ರಾಷ್ಟ್ರ ಎಂಬುದನ್ನು ಒಪ್ಪಲು ಆರ್ ಎಸ್ ಎಸ್ ಸಿದ್ಧವಿಲ್ಲ. ಆದ್ದರಿಂದ ಅವರು ಭಾರತವನ್ನು ಧಾರ್ಮಿಕ ದೇಶವಾಗಿ ಬದಲಾಯಿಸಲು ಬಯಸುತ್ತಾರೆ ಎಂದು ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಜಾಸತ್ತಾತ್ಮಕ ಸರ್ಕಾರದಲ್ಲಿ ಸಂಸತ್ತಿನಲ್ಲಿ ನಿರ್ದಿಷ್ಟ ಧರ್ಮದ ಧಾರ್ಮಿಕ ಕಾರ್ಯಕ್ರಮ ನಡೆಯಬಾರದು. ಇದು ಜಾತ್ಯತೀತ ರಾಷ್ಟ್ರಕ್ಕೆ ಹೊಂದಿಕೆಯಾಗುವುದಿಲ್ಲ. ದೇಶ ಸಂದಿಗ್ಧ ಕಾಲವನ್ನು ಎದುರಿಸುತ್ತಿದೆ ಎಂದು ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!