ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿಯೂ ಮಳೆ ಸುರಿದಿದ್ದು, ಜೂ.4ರವರೆಗೆ ಮಳೆ ಮುಂದುವರಿಯುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ, ಚಿಕ್ಕಬಳ್ಳಾಪುರ, ಉಡುಪಿ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.