ಕುಡಿಯುವ ನೀರಿಗೆ ಹಾಹಾಕಾರ: ನೀರು ಬಿಡುಗಡೆಗಾಗಿ ‘ಮಹಾ ಸಿಎಂ’ಗೆ ಪತ್ರ ಬರೆದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಬೇಸಿಗೆಯಿಂದಾಗಿ ಕುಡಿಯುವ ನೀರಿಗೆ ಆಹಾಕಾರ ಉಂಟಾಗಿದೆ. ಈ ಹಿನ್ನಲೆಯಲ್ಲಿ ಎರಡು ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಕರ್ನಾಟಕ ಸಿಎಂ ಸಿದ್ಧರಾಮಯ್ಯ ಪತ್ರದಲ್ಲಿ ಮನವಿ ಮಾಡಿದ್ದಾರೆ.

ತಮ್ಮ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ, “ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಮಾರ್ಚ್ 2023 ರಿಂದ ತೀವ್ರ ಬೇಸಿಗೆಯಿಂದಾಗಿ ಕುಡಿಯುವ ನೀರಿನ ತೀವ್ರ ಕೊರತೆ ಎದುರಾಗಿದೆ” ಎಂದಿದ್ದಾರೆ.

ಈ ಬೇಸಿಗೆಯಲ್ಲಿ ಕರ್ನಾಟಕ ಸರ್ಕಾರವು ಮಾನವ ಮತ್ತು ಜಾನುವಾರುಗಳ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು 3.00 ಟಿಎಂಸಿ ನೀರನ್ನು ಕೃಷ್ಣಾ ನದಿಗೆ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 3.00 ಟಿಎಂಸಿ ನೀರು ಮತ್ತು ಕೊಯ್ನಾ ಜಲಾಶಯದಿಂದ ಬಿಡುಗಡೆ ಮಾಡಬೇಕೆಂದು ಕರ್ನಾಟಕ ಸರ್ಕಾರವು ಈ ಹಿಂದೆ ಮನವಿ ಮಾಡಿತ್ತು. ಅದನ್ನು ಮಹಾರಾಷ್ಟ್ರ ಸರ್ಕಾರವು ಪರಿಗಣಿಸಿದ್ದು ಮೇ 2023ರ ಮೊದಲ ಹದಿನೈದು ದಿನಗಳಲ್ಲಿ ಕೃಷ್ಣಾ ನದಿಗೆ 1.00 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗಿದೆ. ನಾನು ಈ ಮೂಲಕ ಮಹಾರಾಷ್ಟ್ರ ಸರ್ಕಾರಕ್ಕೆ ನನ್ನ ಪ್ರಾಮಾಣಿಕ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಬರೆದಿದ್ದಾರೆ.

ನೇರವಾಗಿ ವಿಷಯಕ್ಕೆ ಬಂದ ಸಿಎಂ ಸಿದ್ದರಾಮಯ್ಯ “ಕರ್ನಾಟಕದ ಉತ್ತರ ಜಿಲ್ಲೆಗಳಲ್ಲಿ ಬೇಸಿಗೆಯ ತೀವ್ರ ಪರಿಸ್ಥಿತಿ ಇನ್ನೂ ಮುಂದುವರೆದಿದ್ದು, ಮಾನವರು ಮತ್ತು ಜಾನುವಾರುಗಳ ಬಳಕೆಗಾಗಿ ನೀರಿನ ಅವಶ್ಯಕತೆಯಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಇನ್ನೂ ಆರಂಭವಾಗಿಲ್ಲ ಎಂದು ಹೇಳಿದ್ದಾರೆ.

ಮೇಲ್ಕಂಡ ವಿಚಾರದ ಹಿನ್ನೆಲೆಯಲ್ಲಿ ಉತ್ತರಕರ್ನಾಟಕದ ಜನರು ಮತ್ತು ಜಾನುವಾರುಗಳ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ವಾರ್ನಾ/ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2.00 ಟಿಎಂಸಿ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 3.00 ಟಿಎಂಸಿ ನೀರನ್ನು ತಕ್ಷಣ ಬಿಡುಗಡೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ವಿನಂತಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!