ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಮೆಟ್ರೋ (Bengaluru Metro) ರೈಲು ನಿಗಮ ನಿಯಮಿತದಲ್ಲಿ ವಿವಿಧ 236 ಹುದ್ದೆಗಳ ಭರ್ತಿಗಾಗಿ ಬರುವ ಜೂನ್ 6ರಿಂದ 8ರವರೆಗೆ ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು (Written Exam) ಮುಂದೂಡಿಕೆ ಮಾಡಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ಪ್ರಕಟಿಸಿದೆ.
ಪದವಿಪೂರ್ವ ಶಿಕ್ಷಣ ಇಲಾಖೆಯ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಹಿನ್ನೆಲೆಯಲ್ಲಿ ಈ ಮುಂದೂಡಿಕೆ ಮಾಡಿರುವುದಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪರೀಕ್ಷೆ ನಡೆಯುವ ಬದಲೀ ದಿನಾಂಕಗಳನ್ನು ಪ್ರಾಧಿಕಾರದ ಜಾಲತಾಣದಲ್ಲಿ ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.