ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದೆ .
ಚೆನ್ನೈ -ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ಹಾಗೂ ಸರಕು ಸಾಗಾಣೆ ರೈಲು ಮುಖಾಮುಖಿ ಡಿಕ್ಕಿಯಾಗಿದೆ.
12841 ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾದ ರಭಸಕ್ಕೆ ಪ್ರಯಾಣಿಕರಿದ್ದ ರೈಲಿನ ಹಲವು ಬೋಗಿಗಳು ಹಳಿ ತಪ್ಪಿದೆ. ಭೀಕರ ಅಪಘಾತದಲ್ಲಿ ಹಲವರು ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳದ ಶಾಲಿಮಾರ್ ರೈಲು ನಿಲ್ದಾಣದಿಂದ ಚೆನ್ನೈಗೆ ಆಗಮಿಸುತ್ತಿದ್ದ ಈ ರೈಲು ಒಡಿಶಾದಲ್ಲಿ ಸರಕು ರೈಲಿಗೆ ಡಿಕ್ಕಿಯಾಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳು ಸ್ಥಳಕ್ಕೆ ತೆರಳಿವೆ.
ಪ್ರಸ್ತುತ ಸ್ಥಳಗದಲ್ಲಿ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲು ಮತ್ತು ಎಸ್‌ಆರ್‌ಸಿಗೆ ರಾಜ್ಯ ಮಟ್ಟದಿಂದ ಯಾವುದೇ ಹೆಚ್ಚುವರಿ ಸಹಾಯದ ಅಗತ್ಯವಿದ್ದರೆ ಸ್ಥಳಕ್ಕೆ ತಲುಪಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವ ಕಾರ್ಯ ನಡೆಯುತ್ತಿದೆ. ಹಲವು ಬೋಗಿಗಳು ಹಳಿ ತಪ್ಪಿದ ಕಾರಣ ರಕ್ಷಣಾ ಕಾರ್ಯ ನಿರಂತರವಾಗಿ ಸಾಗಿದೆ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.