ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಟ್ಟಾರಿ-ವಾಘಾ ಗಡಿಯಲ್ಲಿ ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿ ಸೋಮವಾರ ಹೊಡೆದುರುಳಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಭಾರತೀಯ ವಾಯುಪ್ರದೇಶವನ್ನು ಉಲ್ಲಂಘಿಸಿದ ಪಾಕಿಸ್ತಾನಿ ಡ್ರೋನ್ ಅನ್ನು ಅಮೃತಸರದಲ್ಲಿ ಎಚ್ಎಸ್ಎಫ್ ಸಿಬ್ಬಂದಿ ತಡೆಹಿಡಿದು ಹೊಡೆದುರುಳಿಸಿದ್ದಾರೆ.
“ಶಂಕಿತ ಮಾದಕ ಸರಕುಗಳ ಒಟ್ಟು ತೂಕ ಸುಮಾರು 3.2 ಕೆಜಿ” ಎಂದು ಅಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.