Friday, December 19, 2025

ಮಹಾತ್ಮಾ ಗಾಂಧಿ ನನ್ನ ಕುಟುಂಬದವರಲ್ಲ’, ಆದರೆ…ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ- VB G RAM G) ಮಸೂದೆ ಮಂಡಿಸಿದೆ.

ಆದ್ರೆ ಯುಪಿಎ ಸರ್ಕಾರದ ಅವಧಿಯಲ್ಲಿ ತಂದ ಮನರೆಗಾ ಯೋಜನೆಗೆ ಮರುನಾಮಕರಣ ಮಾಡಿ ಮಸೂದೆ ಮಂಡಿಸಲಾಗಿದೆ. ಇದು ಕಾಂಗ್ರೆಸ್ ಆಕ್ರೋಶಕ್ಕೆ ಕಾರಣವಾಗಿದೆ.

ಈ ಮರುನಾಮಕರಣ ಮೂಲಕ ಬಿಜೆಪಿ ಮಹಾತ್ಮಾ ಗಾಂಧಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದೆ. ಇದೇ ವೇಳೆ ಸಂಸತ್ತಿನ ಒಳಗೆ ಹಾಗೂ ಹೊರಗೆ ಭಾರಿ ವಿರೋಧ ವ್ಯಕ್ತಪಡಿಸಿರುವ ಪ್ರಿಯಾಂಕಾ ವಾದ್ರಾ ಗಾಂಧಿ ಭಾರಿ ಪ್ರತಿಭಟನೆ ನಡೆಸಿದ್ದಾರೆ.

ಜಿ ರಾಮ್ ಜಿ ಮಸೂದೆ ವಿರೋಧಿಸಿ ಪ್ರಿಯಾಂಕಾ ವಾದ್ರಾ , ಮಹಾತ್ಮಾ ಗಾಂಧಿ ನನ್ನ ಕುಟುಂಬ ಸದಸ್ಯರಲ್ಲ, ಆದರೆ ನಮ್ಮ ಕುಟುಂಬ ಸದಸ್ಯರಂತೆ ಇದ್ದಾರೆ. ಈ ದೇಶದ ಜನತೆಯೂ ಅದೇ ಭಾವನೆಯಲ್ಲಿ ಮಹಾತ್ಮಾ ಗಾಂಧಿಯನ್ನು ನೋಡುತ್ತಾರೆ. ಪ್ರತಿಯೊಬ್ಬರ ಕುಟುಂಬ ಸದಸ್ಯರಾಗಿ ಮಹಾತ್ಮಾ ಗಾಂಧಿಯನ್ನು ಕಾಣುತ್ತಾರೆ. ಆದರೆ ಬಿಜೆಪಿ ಗಾಂಧಿಗೆ ಅಪಮಾನ ಮಾಡಿದೆ. ಕಾಂಗ್ರೆಸ್ ತಂದ ಮನರೆಗಾ (ಮಹಾತ್ಮಾ ಗಾಂಧಿ ನ್ಯಾಷನಲ್ ರೂರಲ್ ಎಂಪ್ಲಾಯ್‌ಮೆಂಟ್ ಗ್ಯಾರಂಟಿ) ಹೆಸರು ಬದಲಿಸಿದ್ದಾರೆ. ಇದು ಮಹಾತ್ಮಾ ಗಾಂಧಿಗೆ ಮಾಡಿದೆ ಅವಮಾನ ಎಂದು ಹೇಳಿದ್ದಾರೆ.

ಲೋಕಸಭೆ ಚಳಿಗಾಲದ ಅಧಿವೇಶನದಲ್ಲಿ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ವಿಬಿ-ಜಿ RAM ಜಿ ಮಸೂದೆ ಮಂಡಿಸಿದ್ದಾರೆ. ಸದನದ ಸಲಹೆಯನ್ನು ತೆಗೆದುಕೊಳ್ಳದೆ ಮತ್ತು ಯಾವುದೇ ಚರ್ಚೆಯಿಲ್ಲದೆ ಮಸೂದೆಯನ್ನು ತರಾತುರಿಯಲ್ಲಿ ಅಂಗೀಕರಿಸಬಾರದು ಎಂದು ಪ್ರಿಯಾಂಕಾ ಗಾಂಧಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಮನ್‌ರೆಗಾ ಗ್ರಾಮೀಣ ಭಾಗದಲ್ಲಿ ಬಡವರಿಗೆ ಉದ್ಯೋಗ ಕಲ್ಪಿಸಿದ ಯೋಜನೆ. ಈ ಯೋಜನೆಯಲ್ಲಿ ಬಿಜೆಪಿ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ಕಾಂಗ್ರೆಸ್ ಗೆ ರಾಮನ ಸಮಸ್ಯೆ
ಕಾಂಗ್ರೆಸ್ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ, ಕಾಂಗ್ರೆಸ್‌ಗೆ ಈ ಮಸೂದೆ, ತಿದ್ದುಪಡಿಯಲ್ಲಿ ಸಮಸ್ಯೆ ಇಲ್ಲ. ಅಸಲಿ ಸಮಸ್ಯೆ ಇರುವುದು ಈ ಬಿಲ್ ಹೆಸರಿನ ಶಾರ್ಟ್ ಫಾರ್ಮ್‌ನಲ್ಲಿ. ಈ ಬಿಲ್ ಹೆಸರಿನಲ್ಲಿ ರಾಮ್ ಎಂದಿದೆ. ಇದೇ ಅವರಿಗೆ ಸಮಸ್ಯೆಯಾಗಿದೆ. ಕಾಂಗ್ರೆಸ್‌ಗೆ ಯಾವತ್ತೂ ಭಗವಾನ್ ರಾಮ ಹಾಗೂ ರಾಮನ ಹೆಸರು ಸಹಿಸಲು ಸಾಧ್ಯವಿಲ್ಲ ಎಂದು ನಖ್ವಿ ಹೇಳಿದ್ದಾರೆ.

error: Content is protected !!