ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಸೋಮವಾರ ಹೊರಡಿಸಿದೆ. ಅದರಂತೆ, ಮಹಿಳೆಯರು ಉಚಿತವಾಗಿ ಪ್ರಯಾಣಿಸಬೇಕಿದ್ದರೆ ‘ಶಕ್ತಿ ಸ್ಮಾರ್ಟ್‌ಕಾರ್ಡ್’ ಹೊಂದುವುದು ಕಡ್ಡಾಯವಾಗಿರಲಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ಪಡೆಯಬಹುದು. ಕಾರ್ಡ್‌ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸ್ಮಾರ್ಟ್‌ಕಾರ್ಡ್ ದೊರೆಯುವ ವರೆಗೆ ಉಚಿತ ಪ್ರಯಾಣ ಹೇಗೆ?
ಶಕ್ತಿ ಸ್ಮಾರ್ಟ್‌ಕಾರ್ಡ್ ಅನ್ನು ವಿತರಿಸುವವರೆಗೆ ಭಾರತ ಸರ್ಕಾರ/ ಕರ್ನಾಟಕ ಸರ್ಕಾರದ ಇಲಾಖೆ / ಸರ್ಕಾರಿ ಸ್ವಾಮ್ಯದ ಕಛೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಉಚಿತ ಟಿಕೆಟ್ ವಿತರಿಸುವ ಸ೦ದರ್ಭ ಪರಿಗಣಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಯಾವೆಲ್ಲ ಬಸ್ಗಳಲ್ಲಿ ಉಚಿತ ಪ್ರಯಾಣ?
ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸ೦ಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್ಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಯಾವೆಲ್ಲ ಬಸ್ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಇಲ್ಲ?
ಎಸಿ, ನಾನ್ ಎಸಿ ಸ್ಲೀಪರ್ ಬಸ್ಗಳು
ಎಸಿ ಮತ್ತು ಐಷಾರಾಮಿ ಬಸ್ಗಳು
ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಬಸ್ಗಳಿಗೆ ಈ ಯೋಜನೆ ಅನ್ವಯಿಸುವುದಿಲ್ಲ
ಅಂತಾರಾಜ್ಯ ಪ್ರಯಾಣಕ್ಕಿಲ್ಲ ಉಚಿತ ಸೌಲಭ್ಯ
ಕೆಎಸ್ಆರ್ಟಿಸಿ ಬಸ್ಗಳಲ್ಲಿ ಶೇ 50ರಷ್ಟು ಸೀಟ್ ಪುರುಷರಿಗೆ ಮೀಸಲು