ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಬೆಳಗಾವಿ ಜಿಲ್ಲೆ ವಿಭಜನೆ ಕೂಗು ಕೇಳಿಬರುತ್ತಿದೆ. ಈ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಗೋಹತ್ಯೆ ನಿಷೇಧ ಅಷ್ಟೇ ಅಲ್ಲ, ಯಾವ ಪ್ರಾಣಿಯ ಹತ್ಯೆಯನ್ನೂ ನಾನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ, ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆ ಆಗಬೇಕು. ಎಲ್ಲ ನಾಯಕರ ಸಹಮತದೊಂದಿಗೆ ಜಿಲ್ಲೆ ವಿಭಜನೆ ಆಗಲಿ. ಜಿಲ್ಲೆ ವಿಭಜನೆ ಬಗ್ಗೆ ಉನ್ನತ ಮಟ್ಟದಲ್ಲಿ ಚರ್ಚೆಯಾಗಲಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ನಾಯಕರು ಕ್ರಮಕೈಗೊಳ್ಳುತ್ತಾರೆ ಎಂದು ಹೇಳಿದರು.
ಇನ್ನು ಕಾಂಗ್ರೆಸ್ ಜನರಿಗೆ ನೀಡಿರುವ ಐದು ಗ್ಯಾರಂಟಿ ಭರವಸೆಗಳನ್ನು ಈಡೇರಿಸಲಿದೆ. ಇದರಲ್ಲಿ ಯಾವುದೇ ಸಂಶಯ ಬೇಡ ಗೃಹ ಲಕ್ಷ್ಮೀ, ಗೃಹ ಜ್ಯೋತಿ ಸೇರಿದಂತೆ ನಾವು ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ. ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಬಾಡಿಗೆದಾರರು ಗೃಹ ಜ್ಯೋತಿ ಯೋಜನೆಯಿಂದ ವಂಚಿತರಾಗಲ್ಲ, ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ತಿಳಿಸಿದರು.