ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರನ್ನು ಹೊರತುಪಡಿಸಿ ಇತರ ಯಾವುದೇ ವಾಹನ ಸವಾರರನ್ನು ರಸ್ತೆಗಳಲ್ಲಿ ತಡೆಯಬಾರದು ಎಂದು ಡಿಜಿ , ಐಜಿಪಿ ಅಲೋಕ್ ಮೋಹನ್ ಸೂಚನೆ ನೀಡಿದ್ದಾರೆ.
ಡಾ. ಅಲೋಕ್ ಮೋಹನ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾ ನಿರೀಕ್ಷಕರು, ಕರ್ನಾಟಕ ರಾಜ್ಯ ಈ ಕುರಿತು ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ಈ ಬಗ್ಗೆ ಎಲ್ಲಾ ಪೊಲೀಸ್ ಆಯುಕ್ತರು, ಪೊಲೀಸ್ ಅಧೀಕ್ಷಕರಿಗೆ ಮಾಹಿತಿ ನೀಡಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರನ್ನು ಹೊರತುಪಡಿಸಿ, ಇತರ ಯಾವುದೇ ವಾಹನ ಸವಾರರನ್ನು ರಸ್ತೆಗಳಲ್ಲಿ ತಡೆಯಬಾರದು ಎಂದು ಹೇಳಿದ್ದಾರೆ.
ಅತ್ಯಂತ ವೇಗವಾಗಿ ಹೆಚ್ಚುತ್ತಿರುವ ವಾಹನಗಳ ಸಂಖ್ಯೆಯು ಕರ್ನಾಟಕ ರಾಜ್ಯದ ವಿವಿಧ ನಗರಗಳಲ್ಲಿ ಹಾಗೂ ಪಟ್ಟಣಗಳಲ್ಲಿ ಹಲವಾರು ಪರಿಣಾಮಗಳನ್ನು ಉಂಟುಮಾಡಿದೆ. ಅದರಲ್ಲೂ ಮುಖ್ಯವಾಗಿ ಸಂಚಾರ ದಟ್ಟಣೆ, ಮಾಲಿನ್ಯ ಮತ್ತು ಪ್ರಯಾಣದ ಸಮಯದಲ್ಲಿ ಹೆಚ್ಚಳವಾಗಿದೆ ಹಾಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.