ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದ್ಯುತ್ ದರ ಏರಿಕೆ ಕುರಿತಂತೆ ಇಂಧನ ಸಚಿವ ಕೆ.ಜೆ. ಜಾರ್ಜ್ ಪ್ರತಿಕ್ರಿಯೆ ನೀಡಿದ್ದು,
ನಮ್ಮ ಸರ್ಕಾರ ವಿದ್ಯುತ್ ದರ ಹೆಚ್ಚಳ ಮಾಡಿಲ್ಲ. ಹಿಂದಿನ ಸರ್ಕಾರವೇ ವಿದ್ಯುತ್ ದರ ಏರಿಕೆ ಮಾಡಿತ್ತು. ಚುನಾವಣೆ ಘೋಷಣೆ ಹಿನ್ನೆಲೆ ಜಾರಿಗೆ ಬಂದಿರಲಿಲ್ಲ ಎಂದಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ ವಿದ್ಯುತ್ ದರ ಏರಿಕೆ ಮಾಡಿಲ್ಲ. ಚುನಾವಣೆ ಮುಗಿದ ಮೇಲೆ ಹಿಂದಿನ ಸರ್ಕಾರದ ಆದೇಶ ಜಾರಿಯಾಗಿದೆ. ನಮ್ಮ ಸರ್ಕಾರ ಬಡವರು, ಮಧ್ಯಮ ವರ್ಗದವರ ಪರವಾಗಿದೆ ಎಂದು ವಿದ್ಯುತ್ ದರ ಹೆಚ್ಚಳದ ಕುರಿತು ಸ್ಪಷ್ಟನೆ ನೀಡಿದ್ದಾರೆ.