ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಆರಂಭಗೊಂಡಿದ್ದು, ಈ ಕ್ಷಣ ಭಾರತ ಮತ್ತು ಆಸ್ಟ್ರೇಲಿಯಾ ತಂಡದ ಆಟಗಾರರು ತೋಳಿಗೆ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದಿದ್ದಾರೆ.
ಕಳೆದ ಶುಕ್ರವಾರ ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಾಗಾ ಎಂಬಲ್ಲಿ ಮೂರು ರೈಲುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟರಿಗೆ ಸಂತಾಪ ಸೂಚಿಸುವ ಸಲುವಾಗಿ ಉಭಯ ತಂಡಗಳ ಆಟಗಾರರು ಕಪ್ಪುಪಟ್ಟಿ ಧರಿಸಿದರು.
ಲಂಡನ್ನ ಓವಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಆಸ್ಟ್ರೇಲಿಯಾ ತಂಡ ಮೊದಲ ಅವಧಿಯ ಆಟದಲ್ಲಿ ಒಂದು ವಿಕೆಟ್ ನಷ್ಟಗೊಂಡು ಆಟವಾಡುತ್ತಿದ್ದಾರೆ.