ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಗೃಹಲಕ್ಷ್ಮಿ’ ಯೋಜನೆಗೆ (Gruha Lakshmi) ಹಲವು ಷರತ್ತುಗಳನ್ನು ವಿಧಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸಮರ್ಥಿಸಿಕೊಂಡಿದ್ದಾರೆ.
ಪ್ರತಿ ಮನೆಯ ಯಜಮಾನಿಗೆ 2,000 ರೂ. ನೀಡುವ ಈ ಯೋಜನೆಯನ್ನು ಬಡವರನ್ನು ಗಮನದಲ್ಲಿಟ್ಟುಕೊಂಡು ಹಮ್ಮಿಕೊಳ್ಳಲಾಗದೆಯೇ ವಿನಃ ಆದಾಯ ತೆರಿಗೆ ಪಾವತಿಸುವವರಿಗಲ್ಲ ಎಂದು ಅವರು ಹೇಳಿದ್ದಾರೆ.
ಬೆಂಗಳೂರಿನ ನಿವಾಸದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಹೇಳಿದ್ದಾರೆ.
ಪ್ರತಿ ರೂಪಾಯಿಗೆ ಉತ್ತರದಾಯಿತ್ವ ಇರಬೇಕು. ಬಡವರಿಗೆ ಅನುಕೂಲ ಮಾಡಿಕೊಡಲು ನಿರ್ಧರಿಸಿದ್ದೇವೆ. ಐಟಿ ರಿಟರ್ನ್ಸ್ ಸಲ್ಲಿಸುವ ಜನರು ಅದನ್ನು ಕೇಳುತ್ತಿಲ್ಲ. 2000 ರೂಪಾಯಿ ಬೇಡ ಎಂದು ಹಲವರು ಪತ್ರ ಬರೆದಿದ್ದಾರೆ. ಆ ವ್ಯಕ್ತಿಗಳ ಹೆಸರನ್ನು ನಾನು ಬಹಿರಂಗಪಡಿಸಲಾರೆ. ನಾವು ಸರ್ಕಾರ ನಡೆಸುತ್ತಿದ್ದೇವೆ ಮತ್ತು ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.