ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಠ್ಯಪುಸ್ತಕ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ ವರ್ಷವೇ ಪಠ್ಯಪುಸ್ತಕ ಪರಿಷ್ಕರಣೆಯಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಈ ವರ್ಷವೇ ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ, ಮಕ್ಕಳು ತಪ್ಪು ಓದಬಾರದು, ಆದ್ದರಿಂದ ಮುಂದಿನ ವರ್ಷದವರೆಗೆ ಕಾಯಲ್ಲ, ತಜ್ಞರು ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆʼ ಎಂದರು.
ಸರ್ಕಾರ ಈ ಸಂಬಂಧ ಸಭೆ ಮೇಲೆ ಸಭೆ ನಡೆಸುತ್ತಿದ್ದು, ಸದ್ಯದಲ್ಲೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಹೇಳಿದರು.
ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಶಾಲಾ ಪಠ್ಯದಲ್ಲಿ ಲೋಪದೋಷಗಳನ್ನು ಸರಿಪಡಿಸುವಂತ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.