ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ತಾರೆ ಶಿಲ್ಪಾ ಶೆಟ್ಟಿ ಅವರಿಗೆ ಸೇರಿದ ಬೆಂಗಳೂರಿನ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹೃದಯಭಾಗವಾದ ಚರ್ಚ್ ಸ್ಟ್ರೀಟ್‌ನಲ್ಲಿರುವ ‘ಬ್ಯಾಸ್ಟಿಯನ್’ ಪಬ್ ಮೇಲೆ ಮುಂಬೈನಿಂದ ಬಂದ ಐಟಿ ಅಧಿಕಾರಿಗಳ ವಿಶೇಷ ತಂಡವು ಈ ಕಾರ್ಯಾಚರಣೆ ನಡೆಸಿದೆ.
ಕೇವಲ ಬೆಂಗಳೂರು ಮಾತ್ರವಲ್ಲದೆ, ಮುಂಬೈನ ವಿವಿಧ ಸ್ಥಳಗಳಲ್ಲೂ ಏಕಕಾಲಕ್ಕೆ ದಾಳಿ ನಡೆದಿದ್ದು, ತೆರಿಗೆ ಪಾವತಿಯಲ್ಲಿನ ವ್ಯತ್ಯಾಸಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ. ದಾಳಿಯ ವೇಳೆ ಪಬ್‌ನ ವ್ಯವಹಾರಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ.

