ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಎಲ್ಲಾ 224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಡೆಡ್ಲೈನ್ ನೀಡಿದ್ದಾರೆ.
ಜೂನ್ 30ರೊಳಗೆ ಎಲ್ಲಾ ಶಾಸಕರು ಕಡ್ಡಾಯವಾಗಿ ಆಸ್ತಿ ವಿವರ ಸಲ್ಲಿಸುವಂತೆ ಸೂಚನೆ ನೀಡಲಾಗಿತ್ತು. ಆದೇಶ ನೀಡಿ 15 ದಿನಗಳು ಕಳೆದರೂ ಶಾಸಕರು ಆಸ್ತಿ ವಿವರ ಸಲ್ಲಿಸಿಲ್ಲ. ಹೀಗಾಗಿ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಅವರು ಎಲ್ಲಾ ಪಕ್ಷದ ಶಾಸಕರ ಆಸ್ತಿ ವಿವರ ಪಡೆದು ಸಲ್ಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮೌಖಿಕ ಸೂಚನೆ ಕೊಟ್ಟಿದ್ದಾರೆ.
ಕಳೆದ ಬಾರಿ ಆಸ್ತಿ ವಿವರ ಸಲ್ಲಿಸಲಾಗಿದೆ ಎಂದು ಸುಮ್ಮನಿರುವಂತಿಲ್ಲ. ಪುನರಾಯ್ಕೆಯಾದ ಶಾಸಕರು ಹಾಗೂ ಹೊಸದಾಗಿ ಶಾಸಕರಾದವರು ಮತ್ತೊಮ್ಮೆ ಆಸ್ತಿ ವಿವರ ಸಲ್ಲಿಸಬೇಕು. ಜೂನ್ 30ರೊಳಗೆ ಶಾಸಕರು ತಮ್ಮ ಆಸ್ತಿ ವಿವರ ಸಲ್ಲಿಸದಿದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.