ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಲೇಜು ವಿದ್ಯಾರ್ಥಿನಿಯೊಬ್ಬರಿಗೆ ಚುಡಾಯಿಸಿದ ಪೊರ್ಕಿಗೆ ಯುವತಿ ಚಪ್ಪಲಿಸೇವೆ ಮಾಡಿರುವ ಘಟನೆ ಶುಕ್ರವಾರ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯ ಮುಖಕ್ಕೆ ಕಪಾಳಮೋಕ್ಷ ಮಾಡಿ ಸಾರ್ವಜನಿಕವಾಗಿ ಚಪ್ಪಲಿಯಿಂದ ಹೊಡೆದಿರುವ ಘಟನೆ ನಡೆದಿದೆ.
ಘಟನೆಯ ಸಂಪೂರ್ಣ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಿರುಕುಳ ನೀಡಿದ ಯುವಕನನ್ನು ಗ್ರಾಮಸ್ಥರು ಹಿಡಿದು ಸರಿಯಾಗಿ ಬುದ್ದಿ ಕಲಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಹಾಸ್ಟೆಲ್ನಿಂದ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಬಂದು ಕಿರುಕುಳ ನೀಡಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ವಿಡಿಯೋದಲ್ಲಿ, ಕಪಾಳಮೋಕ್ಷ ಮಾಡುತ್ತಿದ್ದಂತೆ ಯುವಕ ತನ್ನನ್ನು ಬಿಟ್ಟುಬಿಡಿ ಎಂದು ಸ್ಥಳೀಯರಲ್ಲಿ ಮನವಿ ಮಾಡುತ್ತಿರುವುದು ಕಂಡುಬಂದಿದೆ. ಬಳಿಕ ಸ್ಥಳೀಯರು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.