ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ 6:34ಕ್ಕೆ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ.
ಮಾಹಿತಿಯ ಪ್ರಕಾರ 33 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಈವರೆಗೆ ಯಾವುದೇ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.
https://twitter.com/NCS_Earthquake/status/1667706015972986880?s=20