Friday, December 19, 2025

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ? ಜನಪದ ಗಾಯಕ ಮ್ಯೂಸಿಕ್ ಮೈಲಾರಿ ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿರುವ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ ಸೇರಿ 6 ಜನ ಸಹಚರರ ಮೇಲೆ ಪೋಕ್ಸೋ ಕೇಸ್‌ ದಾಖಲಾಗಿದೆ. ಈ ಘಟನೆ ಅಕ್ಟೋಬರ್‌ 24 ರಂದು ಬೆಳಗಾವಿಯಲ್ಲಿ ನಡೆದಿದ್ದು, ಅಪ್ರಾಪ್ತ ಬಾಲಕಿ ಬೆಳಗಾವಿ ಮೂಲದವಳು ಎಂದು ತಿಳಿದುಬಂದಿದೆ.

ಅ. 24ರಂದು ಬೆಳಗಾವಿ ಜಿಲ್ಲೆಯ ಒಂದು ಗ್ರಾಮದಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಹಾಡಲು ಮ್ಯೂಸಿಕ್ ಮೈಲಾರಿ ಬಂದಿದ್ದ. ಇದೇ ಆರ್ಕೆಸ್ಟ್ರಾದಲ್ಲಿ ನೃತ್ಯ ಮಾಡಲು ಅಪ್ರಾಪ್ತ ಬಾಲಕಿ ಸಹ ನೃತ್ಯ ಪ್ರದರ್ಶನಕ್ಕಾಗಿ ಬಂದಿದ್ದಾಳೆ.

ಕಾರ್ಯಕ್ರಮ ಮುಗಿದ ಬಳಿಕ ಆಕೆಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲಾಗಿದ್ದು, ವಿಡಿಯೋ ಸಹ ಮಾಡಿಕೊಂಡಿದ್ದಾರೆ. ನಂತರ ಆತನ 6 ಜನ ಸಹಚರರು ಒಂದು ವೇಳೆ ಈ ಘಟನೆ ಬಗ್ಗೆ ಎಲ್ಲಿಯೂ ಬಾಯಿ ಬಿಡದಂತೆ ಎಂದು ವಿಡಿಯೋ ಮಾಡಿ ಹೇಳಿಕೆ ಪಡೆದುಕೊಂಡಿದ್ದಾರೆ ಎಂದು ಬಾಲಕಿ ಗಂಭೀರ ಆರೋಪ ಮಾಡಿದ್ದಾಳೆ. ಡಿ.14 ರಂದು ಬಾಲಕಿ ಬೆಳಗಾವಿಯ ಚಿಕ್ಕೋಡಿ ಪೊಲೀಸ್‌ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾಳೆ. ಈ ಕುರಿತು ಚಿಕ್ಕೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಂತರ ಡಿ.15 ರಂದು ಬಾಗಲಕೋಟೆಯ ಮಹಾಲಿಂಗಪುರ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ.

error: Content is protected !!