ಬಿಳಿ ಇಲಿಕ್ಕಿಂತ ರಾಮನ ಪಾತ್ರಕ್ಕೆ ಯಶ್ ಬೆಸ್ಟ್: ನಟಿ ಕಂಗನಾ ರಣಾವತ್

ಹೊಸದಿಂಗತ ಡಿಜಿಟಲ್‌ ಡೆಸ್ಕ್:‌

ಬಾಲಿವುಡ್ ನಲ್ಲಿ ರಾಮಾಯಣ (Ramayana) ಆಧಾರಿತ ಸಿನಿಮಾ ಬರಲಿದೆ ಎನ್ನುವ ಸುದ್ದಿಹರಿದಾಡುತ್ತಿದೆ. ಈ ಸಿನಿಮಾದಲ್ಲಿ ಭಾರತೀಯ ಸಿನಿಮಾ ರಂಗದ ಹೆಸರಾಂತ ನಟರು ಇರಲಿದ್ದಾರೆ ಎಂದೂ ಹೇಳಲಾಗುತ್ತಿದೆ.

ಈ ಸಿನಿಮಾದಲ್ಲಿ ರಾಮನಾಗಿ ರಣಬೀರ್ ಕಪೂರ್ (Ranbir Kapoor) ಕಾಣಿಸಿಕೊಂಡರೆ, ಸೀತೆಯಾಗಿ ಆಲಿಯಾ ಭಟ್ (Alia Bhatt) ನಟಿಸಲಿದ್ದಾರೆ ಎನ್ನುವ ಸುದ್ದಿ ಇದೆ. ನಿಜ ಜೀವನದಲ್ಲೂ ಸತಿ-ಪತಿಯಾಗಿರುವ ರಣಬೀರ್ ಮತ್ತು ಆಲಿಯಾ ಭಟ್ ತೆರೆಯ ಮೇಲೂ ಅಂಥಧ್ದೇ ಪಾತ್ರ ಮಾಡಲಿದ್ದಾರೆ ಎಂದು ಬಿಟೌನ್ ಮಾತನಾಡಿಕೊಳ್ಳುತ್ತಿದೆ.

ಇದರ ಜೊತೆಗೆ ಕನ್ನಡದ ನಟಿ ರಾಕಿಂಗ್ ಸ್ಟಾರ್ ಯಶ್ (Yash) ಅವರು ರಾವಣ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.ಆದ್ರೆ ಈ ಸ್ಟಾರ್ ಗಳ ಬಗ್ಗೆ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್ ಟೀಕೆ ಮಾಡಿದ್ದಾರೆ. ಅದರಲ್ಲೂ ಪರೋಕ್ಷವಾಗಿ ರಣಬೀರ್ ಕಪೂರ್ ಟೀಕಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಕಂಗನಾ ರಣಾವತ್ (Kangana Ranaut), ‘ನಾನು ಇತ್ತೀಚಿನ ದಿನಗಳಲ್ಲಿ ರಾಮಾಯಣ ಸಿನಿಮಾ ಬಗ್ಗೆ ಕೇಳುತ್ತಿರುವೆ. ಅದರಲ್ಲಿ ಮಾದಕ ವ್ಯಸನಿಯೊಬ್ಬ ರಾಮನ ಪಾತ್ರ ಮಾಡಲಿದ್ದಾನಂತೆ. ತೆಳ್ಳಗಿನ ಬಿಳಿ ಇಲಿಯು ಕೆಟ್ಟ ರೀತಿಯಲ್ಲಿ ಬೇರೆಯವರ ಬಗ್ಗೆ ಪಿ.ಆರ್ ಮಾಡಿಕೊಂಡು ಓಡಾಡುವಲ್ಲಿ ಕುಖ್ಯಾತಿ ಪಡೆದವನು. ಇವನು ಕೇವಲ ನಟನಲ್ಲ, ಹೆಣ್ಣು ಬಾಕ ಕೂಡ. ಇಂಥವನು ರಾಮನಾಗಲು ಬೆಳೆದು ನಿಂತಿದ್ದಾನೆ’ ಎಂದು ಕಿಡಿಕಾರಿದ್ದಾರೆ.

ಯಶ್ ಅವರಿಗೆ ರಾವಣನ ಪಾತ್ರ ನೀಡಲಾಗಿದೆ ಎಂದು ಕೇಳಿದ್ದೇನೆ. ರಾವಣ ಪಾತ್ರಕ್ಕಿಂತ ಅವರಿಗೆ ರಾಮನ ಪಾತ್ರ ಹೊಂದುತ್ತದೆ ಎಂದು ಪರೋಕ್ಷವಾಗಿ ರಾಕಿಂಗ್ ಸ್ಟಾರ್ ಬೆಂಬಲಕ್ಕೆ ನಿಂತಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!