ಹೊಸದಿಂಗತ ಡಿಜಿಟಲ್ ಡೆಸ್ಕ್:
ಜಪಾನ್ ನಡೆದ ಕಿರಿಯ ಮಹಿಳೆಯರ ಏಷ್ಯಾಕಪ್ ಹಾಕಿ ಟೂರ್ನಿಯಲ್ಲಿ(Hockey Asia Cup) ಭಾರತ ತಂಡ ಕೊರಿಯಾವನ್ನು ಮಣಿಸುವ ಮೂಲಕ ಚಿನ್ನದ ಪದಕ ಜಯಿಸಿದೆ.
ಈ ಮೂಲಕ 2ನೇ ಪ್ರಯತ್ನದಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿತು.
ಪ್ರಶಸ್ತಿ ಸುತ್ತಿನ ಕಾಳಗದಲ್ಲಿ ಭಾರತದ ಕಿರಿಯ ಮಹಿಳೆಯರ ತಂಡ ಅಮೋಘ ಪ್ರದರ್ಶನ ತೋರುವ ಮೂಲಕ ಕೊರಿಯಾ ತಂಡವನ್ನು 2-1 ಗೋಲ್ಗಳ ಅಂತರದಿಂದ ಬಗ್ಗು ಬಡಿದಿದೆ.
ಸೆಮಿಫೈನಲ್ ಪಂದ್ಯದಲ್ಲಿ ಭಾರತ ಆತಿಥೇಯ ಜಪಾನ್ ವಿರುದ್ಧ 1-0 ಗೋಲಿನ ಅಂತರದಿಂದ ರೋಚಕ ಗೆಲುವು ಸಾಧಿಸಿತ್ತು. ಜತೆಗೆ ವರ್ಷಾಂತ್ಯದಲ್ಲಿ ಚಿಲಿಯಲ್ಲಿ ನಡೆಯಲಿರುವ ಎಫ್ಐಎಚ್ ಕಿರಿಯರ ಮಹಿಳಾ ವಿಶ್ವಕಪ್ಗೂ ಅರ್ಹತೆ ಗಿಟ್ಟಿಸಿಕೊಂಡಿತ್ತು.