ಹಸೆಮಣೆ ಏರಬೇಕಿತ್ತು….ಆದರೆ ಸೇರಿದ್ದು ಸ್ಮಶಾನದ ಮಡಿಲು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾವಿ ದಂಪತಿ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸ್ನಾನಕ್ಕೆ ಜೊತೆಯಾಗಿ ಹೋಗಿದ್ದ ಯುವಕ-ಯುವತಿ ಬಾತ್ ರೂಮ್ ಒಳಗೆ ಸಾವನ್ನಪ್ಪಿದ್ದು, ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದವರು ಇಂದು ಸ್ಮಶಾನ ಸೇರಿದ್ದಾರೆ.

ಮೃತರನ್ನು ಗುಂಡ್ಲುಪೇಟೆ ತಾಲೂಕಿನ ಚಂದ್ರಶೇಖರ್ ಹಾಗೂ ಗೋಕಾಕ್ ತಾಲೂಕಿನ ಸುಧಾರಾಣಿ ಎಂದು ಗುರುತಿಸಲಾಗಿದೆ.

ಹತ್ತನೇ ತಾರೀಕಿನಂದು ಸಂಜೆ ಚಿಕ್ಕಜಾಲದ ತರಬನಹಳ್ಳಿ ಈ ಘಟನೆ ನಡೆದಿದ್ದು, ರಾತ್ರಿ 09-10 ಗಂಟೆ ಸುಮಾರಿಗೆ ಗ್ಯಾಸ್ ಗೀಸರ್ ಆನ್ ಮಾಡಿಕೊಂಡು ಬಾತ್ ರೂಮ್ ಗೆ ಸ್ನಾನಕ್ಕೆಂದು ಇಬ್ಬರೂ ಹೋಗಿದ್ದರು. ಬಾತ್ ರೂಮ್ ನ ಕಿಟಕಿ ಹಾಗೂ ಬಾಗಿಲು ಸಂಪೂರ್ಣವಾಗಿ ಲಾಕ್ ಮಾಡಿ ಇಬ್ಬರು ಸ್ನಾನ ಮಾಡುತ್ತಿದ್ದರು. ಈ ವೇಳೆ ಬಾತ್ ರೂಂನಲ್ಲಿ ಕಾರ್ಬನ್ ಮೊನಾಕ್ಸೈಡ್ ಸೋರಿಕೆಯಾಗಿದ್ದು, ಸ್ನಾನ ಮಾಡುತ್ತಲೇ ಇಬ್ಬರೂ ಪ್ರಜ್ಞೆ ತಪ್ಪಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಮರುದಿನ ಬೆಳಗ್ಗೆ ಮಾಲೀಕರು ಅನುಮಾನಗೊಂಡು ಮನೆಯನ್ನು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಅವರು ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರ ಸಮ್ಮುಖದಲ್ಲಿ ಬಾಗಿಲು ಮುರಿದು ಮೃತದೇಹಗಳನ್ನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ತರಬನಹಳ್ಳಿಯಲ್ಲಿ ಚಂದ್ರಶೇಖರ್ ಮನೆ ಮಾಡಿಕೊಂಡಿದ್ದ. ಮೊನ್ನೆ ಸಂಜೆ ಸುಧಾರಾಣಿ ಮನೆಗೆ ಬಂದಿದ್ದರು ಎನ್ನಲಾಗಿದೆ. ಇಬ್ಬರೂ ನಂದಿಹಿಲ್ಸ್ ಬಳಿಯ ಗಾಲ್ಪ್ ಹೋಟೆಲ್ ನಲ್ಲಿ ಒಟ್ಟಿಗೆ ಕೆಲಸ ಮಾಡಿಕೊಂಡಿದ್ದು, ಮದುವೆಯಾಗಲು ತಯಾರಿ ನಡೆಸುತ್ತಿದ್ದರು. ಇದೇ ಸಂದರ್ಭದಲ್ಲಿ ಈ ದುರಂತ ನಡೆದಿದ್ದು, ಜೋಡಿ ಮದುವೆಗೆ ಮುಂಚೆಯೇ ಮಸಣ ಸೇರಿದೆ. ಎರಡು ದಿನಗಳ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ.

ಸದ್ಯ ಮೃತದೇಹಗಳನ್ನ ಅಂಬೇಡ್ಕರ್ ಆಸ್ಪತ್ರೆಗೆ ಶಿಪ್ಟ್ ಮಾಡಿದ್ದು, ನಾಳೆ ಮರಣೋತ್ತರ ಪರೀಕ್ಷೆ ನಡೆಯಲಿದೆ. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!