Thursday, December 18, 2025

ಸದನದಲ್ಲಿ ಗೃಹಲಕ್ಷ್ಮೀ ಜಟಾಪಟಿ: ಹಣ ಬಿಡುಗಡೆ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳಿಗೆ ಸರಿಯಾಗಿ ತಲುಪುತ್ತಿಲ್ಲ ಎಂದು ವಿಪಕ್ಷಗಳು ಆರೋಪಿಸಿವೆ. ಇದೇ ವಿಚಾರವಾಗಿ ಬುಧವಾರ ಸದನದಲ್ಲಿ ಗದ್ದಲ ಉಂಟಾಗಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸಿವೆ. ಈ ಬಗ್ಗೆ ಸದನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ತಪ್ಪೊಪ್ಪಿಕೊಂಡಿದ್ದಾರೆ. ಆದ್ರೀಗ ಈ ಬಗ್ಗೆ ಮತ್ತೆ ಸ್ಪಷ್ಟನೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​, ಆದಷ್ಟು ಬೇಗ ಮಹಿಳೆಯರ ಖಾತೆಗೆ ‌ಹಣ ಹಾಕುತ್ತೇವೆ ಎಂದು ತಿಳಿಸಿದ್ದಾರೆ. ಇನ್ನು ಇದೇ ವೇಳೆ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಗೃಹ ಲಕ್ಷ್ಮೀ ಗದ್ದಲದ ಬಗ್ಗೆ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​, ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಯಾವುದೇ ಗೊಂದಲ ಇಲ್ಲ, ಗೃಹ ಲಕ್ಷ್ಮೀ ಕಂತಿನ ಹಣ ನೇರವಾಗಿ ಡಿಬಿಟಿ ಮೂಲಕ ಹೋಗುತ್ತದೆ. ಇಲ್ಲಿಯವರೆಗೆ ‌ಯೋಜನೆ ಪ್ರಾರಂಭ ಆಗಿ 23 ಕಂತು ಹಣ ಹೋಗಿದೆ. ವಿಪಕ್ಷಗಳು ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನ ಬಗ್ಗೆ ಕೇಳುತ್ತಿದ್ದಾರೆ. ನಾನು ಅವರಿಗೆ 23 ಕಂತಿನ 46 ಸಾವಿರ ಕೋಟಿ ಹಣ ಹೋಗಿದೆ ಉತ್ತರಿಸಿದ್ದೇನೆ ಎಂದು ತಿಳಿಸಿದ್ರು.

2 ತಿಂಗಳ ಹಣ ಎರಡು ತಿಂಗಳ ಬಿಡುಗಡೆ ಆಗಿಲ್ಲ, ಸಿಎಂ ಸಿದ್ದರಾಮಯ್ಯ ಫೈನಾನ್ಸ್ ಮಿನಿಸ್ಟರ್ ಇದ್ದಾರೆ. ಅವರ ಬಳಿ ಈ ಬಗ್ಗೆ ಮಾತಾಡುತ್ತೇನೆ, ಹಣ ಬಿಡುಗಡೆ ಆಗಿಲ್ಲ ಅಂದ್ರೆ ಮಾಡುತ್ತೇವೆ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​, ಹಾದಿ ಬೀದಿಯಲ್ಲಿ ಗ್ಯಾರಂಟಿ ಯೋಜನೆ ಟೀಕೆ ಮಾಡಿದ್ದು ಬಿಜೆಪಿ ಅಂತಾ ತಿರುಗೇಟು ನೀಡಿದ್ರು. ಸರ್ಕಾರದ ಗೃಹ ಲಕ್ಷ್ಮೀ ಯೋಜನೆಗೆ ಮಸಿ ಬಳಿಯಲು ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು.

error: Content is protected !!