ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೊ ಬೆರ್ಲುಸ್ಕೋನಿ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೊ ಬೆರ್ಲುಸ್ಕೋನಿ ಅವರು ಇಂದು ನಿಧನ ಹೊಂದಿದ್ದಾರೆ ಎಂದು ಇಟಾಲಿಯನ್ ಮಾಧ್ಯಮಗಳು ವರದಿ ಮಾಡಿದೆ.

ಲೈಂಗಿಕ ಹಗರಣಗಳು ಮತ್ತು ಭ್ರಷ್ಟಾಚಾರ ಆರೋಪಗಳಿಂದ ಪ್ರಧಾನಿ ಸ್ಥಾನದಿಂದ ಕೆಳಗಿಳಿದ ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೊ ಬೆರ್ಲುಸ್ಕೋನಿ 86ನೇ ವಯಸ್ಸಿನಲ್ಲಿ ಸಾವನ್ನಪ್ಪಿದ್ದಾರೆ. ಇಂದು ಮಿಲನ್‌ನ ಸ್ಯಾನ್ ರಾಫೆಲ್ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಇಟಾಲಿಯನ್ ಮಾಧ್ಯಮಗಳು ಹೇಳಿವೆ.

ಸಿಲ್ವಿಯೊ ಬೆರ್ಲುಸ್ಕೋನಿ ಆರು ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು, ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದಾರೆ. ಡಿಸ್ಚಾರ್ಜ್ ಆಗಿ ಮೂರು ವಾರಗಳ ನಂತರ ರಕ್ತ ಕ್ಯಾನ್ಸರ್​​ನ ಪರೀಕ್ಷೆಗೆಂದು ಶುಕ್ರವಾರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮಿಲನ್‌ನ ಸ್ಯಾನ್ ರಾಫೆಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಹೇಳಲಾಗಿದೆ.

ಸಿಲ್ವಿಯೋ ಬೆರ್ಲುಸ್ಕೋನಿ ಅವರು ಇಟಲಿಯ ಪ್ರಧಾನ ಮಂತ್ರಿ ಜಾರ್ಜಿಯಾ ಮೆಲೋನಿಯ ಸಮ್ಮಿಶ್ರ ಸರ್ಕಾರದಲ್ಲಿ ಕಿರಿಯ ಸಚಿವರಾಗಿ ಹಾಗೂ ಬಲಪಂಥೀಯ ಫೋರ್ಜಾ ಇಟಾಲಿಯಾ ಪಕ್ಷದ ಮುಖ್ಯಸ್ಥರಾಗಿದ್ದರು. ಅವರು 1994 ಮತ್ತು 2011ರ ನಡುವೆ ಒಟ್ಟು ಒಂಬತ್ತು ವರ್ಷಗಳ ಕಾಲ ಮೂರು ಬಾರಿ ಇಟಲಿಯ ಪ್ರಧಾನ ಮಂತ್ರಿಯಾಗಿದ್ದರು. ಅವರು ತಮ್ಮ 33 ವರ್ಷದ ಗೆಳತಿ ಮಾರ್ಟಾ ಫಾಸಿನಾ, ಇಬ್ಬರು ಮಾಜಿ ಪತ್ನಿಯರು ಮತ್ತು ಐದು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!