ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ, ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ (Abhishek Ambarish) ಅವರ ಮದುವೆಗೆ ಇತ್ತೀಚೆಗೆ ಅವಿವಾ ಬಿಡಪ್ಪ ಜೊತೆ ನಡೆಯಿತು.
ಇದೀಗ ನೂತನ ದಂಪತಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi). ಶುಭಾಶಯ ಕೋರಿದ್ದು, ಈ ಕುರಿತ ಪತ್ರವನ್ನು ಸುಮಲತಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಈ ಹಿಂದೆ ಮದುವೆಗೆ (Marriage) ನರೇಂದ್ರ ಮೋದಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಆಹ್ವಾನ ನೀಡಿದ್ದರು ಸುಮಲತಾ ಮತ್ತು ಪುತ್ರ ಅಭಿಷೇಕ್.
ಶುಭಾಶಯ (Greetings) ಕೋರಿ ಬರೆದ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಸುಮಲತಾ (Sumalatha), ‘ಅಭಿಷೇಕ ಅಂಬರೀಶ್–ಅವಿವಾ ಬಿಡಪ್ಪ (Aviva) ಅವರ ಮದುವೆಗೆ ಶುಭಾಶಯಗಳನ್ನು ತಿಳಿಸಿ, ನವ ಜೋಡಿಯ ಹೊಸ ಜೀವನ ಸುಖಕರವಾಗಿರಲಿ ಎಂದು ಹಾರೈಸಿದ ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನಿಮ್ಮ ಹಾರೈಕೆ, ಆಶೀರ್ವಾದ ಸದಾ ನಮ್ಮ ಕುಟುಂಬದ ಮೇಲಿರಲಿ ಎಂದು ಮತ್ತೊಮ್ಮೆ ಧನ್ಯವಾದಗಳನ್ನು ತಿಳಿಸುವೆ’ ಎಂದು ಬರೆದುಕೊಂಡಿದ್ದಾರೆ.
ಪ್ರಧಾನಿ ಮೋದಿ ಮಾತ್ರವಲ್ಲದೆ, ರಾಷ್ಟ್ರಪತಿ ದ್ರೌಪದಿ ಮುರ್ಮು, ಗೃಹ ಸಚಿವ ಅಮಿತ್ ಶಾ ಅವರು ಕೂಡ ಶುಭ ಕೋರಿದ್ದು, ಅವರಿಗೂ ಸುಮಲತಾ ಧನ್ಯವಾದ ತಿಳಿಸಿದ್ದಾರೆ.