ಹೊಸದಿಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಸಿಲು ಧಗಧಗನೆ ಉರಿಯುತ್ತಿದೆ. ಸೂರ್ಯ ಪ್ರಖರವಾಗಿ ಉರಿಯುತ್ತಿದ್ದಾನೆ. ಬಿಸಿಲಿನ ಝಳಕ್ಕೆ ಜನ ಪರದಾಡುತ್ತಿದ್ದಾರೆ. ಬೆಳ್ಳಂಬೆಳಗ್ಗೆ 7 ಗಂಟೆಗೆ 33 ಡಿಗ್ರಿ ತಾಪಮಾನ ದಾಖಲಾಗಿದೆ.
ಇಂದು (ಮಂಗಳವಾರ) ಗರಿಷ್ಠ ತಾಪಮಾನ 41 ಡಿಗ್ರಿ ಮತ್ತು ಕನಿಷ್ಠ 30 ಡಿಗ್ರಿ ಇರುವ ನಿರೀಕ್ಷೆಯಿದೆ. 40 ಡಿಗ್ರಿ ತಾಪಮಾನವು ಸಂಜೆ ರವರೆಗೆ ಮುಂದುವರಿಯುತ್ತದೆ. ಮುಂದಿನ ಐದು ದಿನಗಳ ಕಾಲ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ ಎಂದು ಐಎಂಡಿ ಬಹಿರಂಗಪಡಿಸಿದೆ.
ಬಿಸಿಲಿನ ಪ್ರಭಾವದಿಂದ ಜನರು ಹೊರಗೆ ಹೋಗಲು ಭಯಪಡುತ್ತಾರೆ. ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜನರು ಹೊರಗೆ ಹೋಗುವಾಗ ಎಚ್ಚರಿಕೆ ವಹಿಸುವಂತೆ ಐಎಂಡಿ ಸಲಹೆ ನೀಡಿದೆ.