ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನಸಾಮಾನ್ಯರಿಗೆ ಹೊರೆಯಾಗದಂತೆ ವಿದ್ಯುತ್ ದರ ಪರಿಷ್ಕರಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ಶಾಸಕ ತನ್ವೀರ್ ಸೇಠ್ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪ್ರಚಂಡ ಜಯ ಸಾಧಿಸಿದೆ. ಸರ್ಕಾರ ರಚನೆಯಾದ ದಿನವೇ 5 ಗ್ಯಾರಂಟಿಗಳನ್ನ ಘೋಷಣೆ ಮಾಡಲಾಗಿದೆ. ಅದರಲ್ಲಿ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದು ಹೇಳಲಾಗಿದೆ. ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ ವಿದ್ಯುತ್ ದರ ಏರಿಕೆಯು ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ವಿದ್ಯುತ್ ದರ ಏರಿಕೆಯಿಂದ ನಮ್ಮ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಜನರ ಹಿತದೃಷ್ಟಿಯಿಂದ ವಿದ್ಯುತ್ ದರ ಕಡಿಮೆ ಮಾಡಿ. ಜನಸಾಮಾನ್ಯರಿಗೆ ಹೊರೆಯಾಗದಂತೆ ವಿದ್ಯುತ್ ದರ ಪರಿಷ್ಕರಿಸಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.