ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾನು ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಲ್ಲ, ಅಧಿವೇಶನಕ್ಕೆ ಕೂಡಲೇ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಸೋಲಿನ ಬಗ್ಗೆ ವರಿಷ್ಠರು ಬೇಸರ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ರಾಜ್ಯದ ಜನ ಕೊಟ್ಟ ತೀರ್ಪನ್ನು ಒಪ್ಪಿಕೊಂಡಿದ್ದೇವೆ. ನಾನೇ ವಿಧಾನಸಭೆ ಚುನಾವಣೆ ಸೋಲಿನ ಹೊಣೆ ಹೊತ್ತಿದ್ದೇನೆ ಎಂದರು.
ಕೆಲ ಶಾಸಕರ ಸೋಲಿಗೆ ಬಸವರಾಜ ಬೊಮ್ಮಾಯಿ ಕಾರಣ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ನಾನೇ ಸೋಲಿನ ಹೊಣೆ ಹೊತ್ತಿದ್ದೇನೆ ಅಂದ ಮೇಲೆ ಆರೋಪಕ್ಕೆ ಉತ್ತರಿಸಬೇಕಿಲ್ಲ ಎಂದು ತಿಳಿಸಿದರು.