ಹೊಸದಿಗಂತ ಡಿಜಿಟಲ್ ಡೆಸ್ಕ್:
ದ್ವೇಷ ರಾಜಕಾರಣ ಬಿಜೆಪಿ ಆಸ್ತಿ. ಸತ್ಯಕ್ಕೆ ಸಾವಿಲ್ಲ, ಸುಳ್ಳು ಕೇಸ್‌ಗಳಿಗೆ ಆಯುಷ್ಯವಿಲ್ಲ ಎಂಬುದಕ್ಕೆ ಮಂಗಳವಾರ ಬಂದ ನ್ಯಾಯಾಲಯದ ಆದೇಶವೇ ಸಾಕ್ಷಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸತ್ಯ ಮೇವ ಜಯತೆ, ಬಿಜೆಪಿಗಿಲ್ಲ ಘನತೆ. ನಮ್ಮನ್ನು ಪಿತೂರಿಯಿಂದ ಸೋಲಿಸಲು ಸಾಧ್ಯವಿಲ್ಲ, ದ್ವೇಷದಿಂದ ಕುಗ್ಗಿಸಲು ಸಾಧ್ಯವಿಲ್ಲ. ಬಿಜೆಪಿ ಎಷ್ಟೇ ಪಿತೂರಿ ಮಾಡಿದರೂ ನಮಗೆ ನ್ಯಾಯ ಸಿಕ್ಕಿದೆ. ಬಿಜೆಪಿ ಎಂದರೆ ಬುರುಡೆ ಜನತಾ ಪಕ್ಷವಾಗಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಜೈಲಿಗೆ ಹಾಕಲು ಪಿತೂರಿ ಮಾಡಲಾಗಿದೆ. ಈ ದ್ವೇಷ ರಾಜಕಾರಣ ಇಲ್ಲಿಗೆ ಕೊನೆಯಾಗಬೇಕು. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಈ ಪ್ರತಿಭಟನೆ ಮುಂದುವರಿಯಲಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಜತೆ ನಿಂತು ಅವರ ಕೈ ಬಲಪಡಿಸೋಣ ಎಂದು ಕರೆ ನೀಡಿದರು.
ʼದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್‌ಗಳಿಗೆ ಆಯುಷ್ಯವಿಲ್ಲʼ

