ಪುಣೆ- ಮುಂಬೈ ಎಕ್ಸ್ ಪ್ರೆಸ್ ವೇ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್: ನಾಲ್ವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪುಣೆ- ಮುಂಬೈ ಎಕ್ಸ್ ಪ್ರೆಸ್ ವೇ ನಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ ಲಾರಿ ಹೊತ್ತಿ ಉರಿದು ನಾಲ್ವರು ಮೃತಪಟ್ಟ ಘಟನೆ ನಡೆದಿದೆ.

ಈ ದುರ್ಘಟನೆ ಇಂದು ಲೋನಾವಾಲಾ-ಖಂಡಾಲಾ ಮಾರ್ಗದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯೊಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ.

ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ಅವಘಡ ಸಂಭವಿಸಿದೆ . ಲಾರಿ ಪಲ್ಟಿ ಹೊಡೆದ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡು ಉರಿದಿದೆ. ಬೆಂಕಿಯ ತೀವ್ರತೆ ಹೆಚ್ಚಾಗಿ ಬ್ರಿಡ್ಜ್ ಕೆಳಗೆ ಸಂಚರಿಸುತ್ತಿದ್ದವರ ಮೇಲೂ ಪರಿಣಾಮ ಬೀರಿದೆ.

ಸೇತುವೆಯ ಕೆಳಭಾಗದಲ್ಲಿ ಪ್ರಯಾಣಿಸುತ್ತಿದ್ದ ಬೈಕ್ ಸವಾರರಿಗೆ ಬೆಂಕಿ ತಗುಲಿದ್ದು, ಈ ಪೈಕಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here