ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಪರ್ಜಾಯ್ ಚಂಡಮಾರುತದ ತೀವ್ರತೆಯ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ 8 ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ಕೇರಳ, ತಮಿಳುನಾಡು, ಕರ್ನಾಟಕ, ಮಹಾರಾಷ್ಟ್ರ, ಗೋವಾ, ಲಕ್ಷದ್ವೀಪ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ ಹವಾಮಾನ ಎಚ್ಚರಿಕೆ ನೀಡಿದೆ.
ಗುಜರಾತ್ ಕರಾವಳಿಯಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಜೂನ್ 16 ರವರೆಗೆ ಸ್ಥಗಿತಗೊಳಿಸಲಾಗಿದೆ. ಸಮುದ್ರವು ತುಂಬಾ ಪ್ರಕ್ಷುಬ್ಧವಾಗಿರುವುದರಿಂದ ಬಂದರುಗಳನ್ನು ಸಹ ಮುಚ್ಚಲಾಯಿತು. ಹಡಗುಗಳು ಬಂದರುಗಳಲ್ಲಿ ಲಂಗರು ಹಾಕಿದವು. ಚಂಡಮಾರುತ ಸಮೀಪಿಸುತ್ತಿರುವ ಕಾರಣ ಈ ಭಾಗದಲ್ಲಿ ಭಾರೀ ಮಳೆ ಹಾಗೂ ಬಲವಾದ ಗಾಳಿಯೊಂದಿಗೆ ಹವಾಮಾನವು ಪ್ರತಿಕೂಲವಾಗಿದೆ. ಕೇಂದ್ರ ಸಚಿವರು ಚಂಡಮಾರುತದ ಸಮಯದಲ್ಲಿ ಕರಾವಳಿ ಪ್ರದೇಶಗಳಲ್ಲಿನ ಸಿದ್ಧತೆಗಳನ್ನು ಪರಿಶೀಲಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿ ಚಂಡಮಾರುತದ ಸನ್ನದ್ಧತೆಯನ್ನು ಪರಿಶೀಲಿಸಿದರು. ಚಂಡಮಾರುತದ ಸಮಯದಲ್ಲಿ ಹಾನಿಯನ್ನು ಕಡಿಮೆ ಮಾಡಲು ಅಮಿತ್ ಶಾ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗುಜರಾತ್‌ನ ಕಚ್, ಪೋರಬಂದರ್, ಅಮ್ರೇಲಿ, ಗಿರ್ ಸೋಮನಾಥ್ ಮತ್ತು ದ್ವಾರಕಾ ಜಿಲ್ಲೆಗಳಲ್ಲಿ ಶಾಲೆಗಳಿಗೆ ಎರಡು ದಿನಗಳ ರಜೆ ಘೋಷಿಸಲಾಗಿದೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಬುಧವಾರ ಬೆಳಗ್ಗೆ 10 ಗಂಟೆಗೆ ರಾಜ್ಯ ತುರ್ತು ಸೇವಾ ನಿಯಂತ್ರಣ ಕೊಠಡಿಗೆ ಭೇಟಿ ನೀಡಲಿದ್ದಾರೆ. ಇದುವರೆಗೆ 17 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ( NDRF) ತಂಡಗಳನ್ನು ನಿಯೋಜಿಸಲಾಗಿದೆ.