ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಅಗ್ರಹಾರ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ.
ಅಗ್ರಹಾರ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ದಾವಣಗೆರೆ ಮೂಲದ ಶಿವು ನಾಯಕ್ (31) ಹಾಗೂ ಕೊಡಿಗೇನಹಳ್ಳಿ ನಿವಾಸಿ ಪರಮೇಶ್ ಎಂಬುವರು ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದಾಬಸ್ ಪೇಟೆಯಲ್ಲಿ ಸ್ನೇಹಿತನ ಮದುವೆಗೆ 7 ಜನ ಸ್ನೇಹಿತರು ಒಂದೇ ಕಾರಿನಲ್ಲಿ ಹೋಗಿದ್ದರು. ಮದುವೆ ಮುಗಿಸಿಕೊಂಡು ವಾಪಸ್ ಬರುವಾಗ ಅಗ್ರಹಾರ ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ.