ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಘೋಷಣೆ ಮಾಡಲಾಗಿದ್ದ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ.
ಗೃಹ ಜ್ಯೋತಿ ಯೋಜನೆಗೆ ಜೂನ್ 15 ರಿಂದ ಅರ್ಜಿ ಸಲ್ಲಿಕೆ ಆರಂಭಿಸಲಾಗುವುದು ಎಂದು ಈ ಹಿಂದೆ ರಾಜ್ಯ ಸರ್ಕಾರ ತಿಳಿಸಿತ್ತು. ಆದರೆ ಇದೀಗ ತಾಂತ್ರಿಕ ದೋಷದಿಂದಾಗಿ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ ದಿನಾಂಕವನ್ನು ಜೂನ್ 18ಕ್ಕೆ ಮುಂದೂಡಲಾಗಿದೆ.
ಜೂನ್ 18 ರಿಂದ ಸೇವಾಸಿಂಧು ಪೋರ್ಟಲ್ ನಲ್ಲಿ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಗ್ರಾಹಕರ ಅನುಕೂಲಕ್ಕಾಗಿ ಕಂಪ್ಯೂಟರ್, ಮೊಬೈಲ್ ನಿಂದ ಅರ್ಜಿ ಸಲ್ಲಿಸಬಹುದು.
ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಸೆಂಟರ್ ಗಳಲ್ಲೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಗ್ರಾಹಕರ ದೃಷ್ಠಿಯಿಂದ ಸರ್ವರ್ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಎಲ್ಲಾ ಸಿದ್ಧತೆಗಳನ್ನು ಇ-ಗೌರ್ನೆನ್ಸ್ ಇಲಾಖೆ ಮಾಡಿಕೊಂಡಿದೆ.
ಗೃಹ ಜ್ಯೋತಿ ವಿದ್ಯುತ್ ಯೋಜನೆಗೆ ಅರ್ಜಿ ಸಲ್ಲಿಕೆ ಜೂನ್.18ರಿಂದ ಆರಂಭವಾಗಲಿದ್ದು, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುತ್ತದೆ.