ಹೊಸದಿಗಂತ ಡಿಜಿಟಲ್ ಡೆಸ್ಕ್:
ವೆಬ್‌ಸೈಟ್ ತಾಂತ್ರಿಕ ದೋಷಗಳಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಮುಂದೂಡಲಾಗಿದೆ ಎನ್ನುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ನಾಳೆಯಿಂದಲೇ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್‌ದಾರರು ನಾಳೆಯಿಂದ ಅರ್ಜಿ ಸಲ್ಲಿಸಬಹುದು, ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಆಫ್‌ಲೈನ್ ಅರ್ಜಿ ಸಲ್ಲಿಕೆ
ಇನ್ನು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಿಗೆ ತೆರಳಿ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಮಹಿಳೆಯ ಆಧಾರ್ ಜತೆಗೆ ಪತಿ ಆಧಾರ್ ಕಾರ್ಡ್ ಮಾಹಿತಿ ನೀಡಬೇಕಿದೆ. ಯಾವುದೇ ಗೊಂದಲಗಳಿದ್ದಲ್ಲಿ 1902ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.
ಕಡೆಯ ದಿನಾಂಕ?
ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಇರುವುದಿಲ್ಲ. ವರ್ಷವಿಡೀ ಅರ್ಜಿ ಸಲ್ಲಿಸುವವರಿಗೆ ಅವಕಾಶ ಇದ್ದೇ ಇದೆ ಎಂದು ಹೇಳಿದ್ದಾರೆ.
ನಾಳೆ ವೆಬ್ ಲಾಂಚ್
ನಾಳೆ ಸಿಎಂ ಸಿದ್ದರಾಮಯ್ಯ ಅವರು ಸೇವಾಸಿಂಧು ವೆಬ್‌ಸೈಟ್ ಲಾಂಚ್ ಮಾಡಲಿದ್ದು, ಮಧ್ಯಾಹ್ನ ೧:೩೦ರ ನಂತರ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.