ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ಆಗಿದೆ. ಈ ಹಿನ್ನಲೆಯಲ್ಲಿ ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ ಭಾಗಿಯಾಗದೇ ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಇಂದು ಸಂಜೆ ನಿಗದಿಯಾಗಿದ್ದ ಯಾವುದೇ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಶಾಸಕರು, ಸಚಿವರುಗಳು ಸರ್ಕ್ಯೂಟ್ ಹೌಸ್‌ಗೆ ದೌಡಾಯಿಸಿ ಸಿಎಂ ಆರೋಗ್ಯ ವಿಚಾರಿಸಿದ್ದಾರೆ.
ಬುಧವಾರ ಮಧ್ಯಾಹ್ನದ ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಅವರು ಅಧಿವೇಶನಕ್ಕೆ ಹೋಗದೆ ಸರ್ಕ್ಯೂಟ್ ಹೌಸ್‌ನಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಸಂಜೆಯವರೆಗೆ ನಿಗದಿಯಾಗಿದ್ದ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸರ್ಕ್ಯೂಟ್ ಹೌಸ್‌ಗೆ ಧಾವಿಸಿ ತಂದೆಯ ಆರೋಗ್ಯ ವಿಚಾರಿಸಿದ್ದಾರೆ.
ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು, ಬೆಳಗಾವಿ ಸರ್ಕ್ಯೂಟ್ ಹೌಸ್‌ಗೆ ನಾಯಕರು ದೌಡು

