ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲಾ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಧಗ ಧಗನೇ ಹೊತ್ತಿ ಉರಿದ ಘಟನೆ ವಿಜಯಪುರ ಜಿಲ್ಲೆಯ ಕೊಟ್ಟೂರು ಪಟ್ಟಣದ ಕೆ.ಅಯ್ಯನಹಳ್ಳಿ ಗ್ರಾಮದ ಬಳಿ ಜೂ.15 ರ ಗುರುವಾರದಂದು ನಡೆದಿದ್ದು, ಅದೃಷ್ಟವಶಾತ್ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಖಾಸಗಿ ಸಂಸ್ಥೆಯ ಶಾಲೆಗೆ ಸೇರಿದ ಬಸ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಹೊಗೆ ಕಾಣಿಸಿಕೊಂಡಿದ್ದು, ಕೂಡಲೇ ಚಾಲಕ ಮಕ್ಕಳನ್ನು ಬಸ್ನಿಂದ ಕೆಳಗಿಳಿಸಿದ್ದಾನೆ. ಈ ಅವಘಡದಿಂದ ಯಾವುದೇ ರೀತಿಯಲ್ಲಿ ಪ್ರಾಣಾಪಾಯ ಸಂಭವಿಸಿಲ್ಲ.
ಈ ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕದಳದಿಂದ ಬೆಂಕಿ ನಂದಿಸೋ ಕಾರ್ಯ ನಡೆದಿದೆ. ಕೊಟ್ಟೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.