ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಪರ್‌ಜೊಯ್ ಚಂಡಮಾರುತ ಗುಜರಾತ್ ಕರಾವಳಿಗೆ ಅಪ್ಪಳಿಸಿದ್ದು, ಇಂದು ಮಧ್ಯರಾತ್ರಿ ನಂತರ ಇದರ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ.
ಚಂಡಮಾರುತದ ಅಬ್ಬರಕ್ಕೆ ಆಗುವ ಹಾನಿಗಳಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಪ್ರಧಾನಿ ಮೋದಿ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಅವರಿಗೆ ಕರೆ ಮಾಡಿ ಆಗು ಹೋಗುಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಪ್ರಬಲ ಚಂಡಮಾರುತ ಅಪ್ಪಳಿಸಿದ ಬಳಿಕ ಅಲ್ಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಇದರ ಜೊತೆಗೆ ವನ್ಯ ಜೀವಿಗಳ ಸುರಕ್ಷತೆ ಬಗ್ಗೆಯೂ ಪ್ರಧಾನಿ ಮೋದಿ ಮಾತನಾಡಿದ್ದಾರೆ. ವಿಶೇಷವಾಗಿ ಗಿರ್ ಅರಣ್ಯದಲ್ಲಿರುವ ಸಿಂಹಗಳ ಸುರಕ್ಷತೆ ಕ್ರಮಗಳ ಬಗ್ಗೆ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಈವರೆಗೂ ಚಂಡಮಾರುತದಿಂದಾಗಿ ಸುಮಾರು 22 ಜನರು ಗಾಯಗೊಂಡಿದ್ದಾರೆ. ಪ್ರಾಣಹಾನಿ ಬಗ್ಗೆ ಯಾವುದೇ ವರದಿ ಆಗಿಲ್ಲ.