ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ರಾಷ್ಟ್ರೀಯ ಹೆದ್ದಾರಿಯ ಜಗಮರ್ಲ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದೆ.
ಆನೆಗಳು ರಸ್ತೆ ದಾಟುತ್ತಿದ್ದ ವೇಳೆ ಟ್ರಕ್ ಡಿಕ್ಕಿ ಹೊಡೆದಿದ್ದು, ಮೂರು ಆನೆಗಳು ಮೃತಪಟ್ಟಿವೆ. ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಯುತ್ತಿದೆ.
ಅತಿವೇಗದ ಚಾಲನೆಯಿಂದಾಗಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅತಿಯಾದ ಬಾಯಾರಿಕೆಯಿಂದ ನೀರಿನ ಹುಡುಕಾಟದಲ್ಲಿ ಆನೆಗಳು ನಾಡಿಗೆ ಕಾಲಿಟ್ಟಿವೆ ಎನ್ನಲಾಗಿದೆ.