ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಅಕ್ಕಿಯ ಕೊರತೆಗೆ ಕೇಂದ್ರ ಸರ್ಕಾರ ಕಾರಣ ಎಂಬ ಆರೋಪ ಮಾಡುತ್ತಿರುವ ಕಾಂಗ್ರೆಸ್ ಜೂನ್ 20 ರಂದು ಜಿಲ್ಲಾ ಕೇಂದ್ರದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲು ಮುಂದಾಗಿದೆ.
ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ಕಾಂಗ್ರೆಸ್ಸಿಗೆ ಬಡವರು ಮತ ಹಾಕಿದ್ದಾರೆ. ಆದ್ರೆ ಬಡವರಿಗೆ ದ್ರೋಹ ಮಾಡಲು ಹೊರಟ ಕೇಂದ್ರ ಸರ್ಕಾರದ ವಿರುದ್ಧ ಜೂನ್ 20 ರಂದು ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.
ಈ ಪ್ರತಿಭಟನೆಯಲ್ಲಿ ಜಿಲ್ಲೆಯ ಶಾಸಕರು, ಕಾರ್ಯಕರ್ತರು ಭಾಗವಹಿಸಬೇಕು. ನಮ್ಮನ್ನು ಕೇಂದ್ರ ಸರ್ಕಾರ ಹೆದರಿಸುತ್ತಿದ್ದು ಇದರ ವಿರುದ್ಧ ನಾವು ಸಿಡಿಯುತ್ತೇವೆ ಎಂದು ವಾಗ್ದಾಳಿ ನಡೆಸಿದರು.
ಕೇಂದ್ರದ ಬಳಿ ಏಳು ಲಕ್ಷ ಮೆಟ್ರಿಕ್ ಟನ್ ಅಕ್ಕಿ ಇದೆ. ನಾವು 2.80 ಲಕ್ಷ ಮೆಟ್ರಿಕ್ ಟನ್ ಕೇಳುತ್ತಿದ್ದೇವೆ. ಯೋಜನೆ ಜಾರಿಯಾಗಲು ಒಂದೆರೆಡು ದಿನಗಳು ತಡವಾಗಬಹುದು ಎಂದರು.