ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಪೊಲೀಸ್ ಇಲಾಖೆ ಮಹತ್ವದ ಆದೇಶ ನೀಡಿದ್ದು, ಇನ್ನು ಎಲ್ಲಾ ಪೊಲೀಸ್ ಠಾಣೆಗಳು ಉನ್ನತ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್ ಇರುವ ನಾಮಫಲಕ ಹಾಕಬೇಕು ಎಂದು ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಸುತ್ತೋಲೆ ಹೊರಡಿಸಿದ್ದಾರೆ.
ಕಮೀಷನರೇಟ್ ವ್ಯಾಪ್ತಿಯಲ್ಲಿ ಸಿಒಪಿ, ಡಿಸಿಪಿ ಮತ್ತು ಎಸಿಪಿ ಮತ್ತು ಜಿಲ್ಲಾ ಮಟ್ಟದಲ್ಲಿ ಎಸ್ ಪಿ, ಹೆಚ್ಚುವರಿ ಎಸ್ಪಿ ಮತ್ತು ಡಿವೈಸ್ಪಿ ಸಂಪರ್ಕಿಸಲು ಅನುಕೂಲವಾಗುವಂತೆ ಅವರ ಮೊಬೈಲ್ ನಂಬರ್ ವುಳ್ಳ ನಾಮಫಲಕವನ್ನು ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಹಾಕುವಂತೆ ಅವರು ಆದೇಶ ಹೊರಡಿಸಿದ್ದಾರೆ.
ಇದರಿಂದ ಸಮಸ್ಯೆ ಹೇಳಿಕೊಂಡು ಬಂದ ಜನರು ನೀಡಿದ್ದ ದೂರುಗಳನ್ನು ಪೊಲೀಸರು ಗಮನಿಸದಿದ್ದರೆ ಸಾರ್ವಜನಿಕರು ಉನ್ನತಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಡಿಜಿಪಿ ಆದೇಶದಲ್ಲಿ ತಿಳಿಸಿದ್ದಾರೆ.