ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತಮಿಳುನಾಡಿನ (Tamil Nadu) ಮಾಜಿ ಪೊಲೀಸ್ ಮಹಾನಿರ್ದೇಶಕ (DGP) ರಾಜೇಶ್ ದಾಸ್ (Rajesh das) ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ.
ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಫೆಬ್ರವರಿ 2021ರಲ್ಲಿ ಹಿರಿಯ ಅಧಿಕಾರಿ ರಾಜೇಶ್ ದಾಸ್ ವಿರುದ್ಧ ಮಹಿಳಾ ಅಧಿಕಾರಿ ದೂರು ದಾಖಲಿಸಿದ್ದರು. ಈ ವೇಳೆ ರಾಜೇಶ್ ದಾಸ್ ಅವರು ಅಂದಿನ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸಾಮಿ ಅವರ ಭದ್ರತೆಗಾಗಿ ಕರ್ತವ್ಯದ ಮೇಲೆ ಹೋಗುತ್ತಿದ್ದಾಗ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದರು.ಇದಾದ ಬಳಿಕ ಎಐಎಡಿಎಂಕೆ ಸರ್ಕಾರ ದಾಸ್ ಅವರನ್ನು ಅಮಾನತುಗೊಳಿಸಿತ್ತು.
ಇದೀಗ ಅಮಾನತುಗೊಂಡಿರುವ ಐಪಿಎಸ್ ಅಧಿಕಾರಿಗೆ ವಿಲ್ಲುಪುರಂ ನ್ಯಾಯಾಲಯವು ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.